ಶಿಕ್ಷಣ

ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆ: “ಯುವ ಮನಸ್ಸುಗಳ ಸಬಲೀಕರಣ” ಕಾರ್ಯಕ್ರಮ

Views: 0

ಕನ್ನಡ ಕರಾವಳಿ ಸುದ್ದಿ: ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಫೆ.23ರಂದು “ಯುವ ಮನಸ್ಸುಗಳ ಸಬಲೀಕರಣ”ಎಂಬ ವಿಶೇಷ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಲಾಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ “ಖ್ಯಾತ ಆಯುರ್ವೇದಿಕ್ ಕಾಲೇಜ್” ಕೋಟೇಶ್ವರದಲ್ಲಿ ಪ್ರೊಫೆಸರ್ ಆಗಿ ಸೇವೆ ಸಲ್ಲಿಸುತ್ತಿರುವ ಹಾಗೂ ಕಂಡ್ಲೂರಿನಲ್ಲಿ ತಮ್ಮದೇ ಆದ ಕ್ಲಿನಿಕ್ ಅನ್ನು ಯಶಸ್ವಿಯಾಗಿ ನಡೆಸುತ್ತಿರುವ ಖ್ಯಾತ ವೈದ್ಯರಾದ ಡಾ.ಪೂಜಾ ಶೆಟ್ಟಿ ಅವರು ಆಗಮಿಸಿ ವಿದ್ಯಾರ್ಥಿಗಳಿಗೆ ಅಮೂಲ್ಯ ಮಾರ್ಗದರ್ಶನ ನೀಡಿದರು.

ಡಾ. ಪೂಜಾ ಶೆಟ್ಟಿ ಅವರು ದಿನನಿತ್ಯ ಹಣ್ಣು-ಹಂಪಲುಗಳನ್ನು ಹೆಚ್ಚು ಸೇವಿಸುವ ಮಹತ್ವವನ್ನು ತಿಳಿಸಿ, ಅಂಗಡಿಗಳಲ್ಲಿ ದೊರೆಯುವ ತಿನಿಸುಗಳನ್ನು ತಪ್ಪಿಸಿ ಮನೆಯಲ್ಲಿ ತಯಾರಿಸಿದ ಪೌಷ್ಟಿಕ ಆಹಾರವನ್ನು ಸೇವಿಸಬೇಕು ಎಂದು ಸಲಹೆ ನೀಡಿದರು. ಜೊತೆಗೆ ಮೊಬೈಲ್ ಫೋನ್‌ಗಳನ್ನು ಅತಿಯಾಗಿ ಬಳಸಬಾರದು, ಟಿವಿಯನ್ನು ಕೂಡ ಹೆಚ್ಚಾಗಿ ವೀಕ್ಷಿಸಬಾರದು ಎಂದು ತಿಳಿಸಿದರು. ಇವು ವಿದ್ಯಾರ್ಥಿಗಳ ಆರೋಗ್ಯ ಹಾಗೂ ಓದಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ ಎಂದು ಹೇಳಿದರು. ನಿಯಮಿತ ವ್ಯಾಯಾಮ, ಸರಿಯಾದ ನಿದ್ರೆ ಹಾಗೂ ಸಕಾರಾತ್ಮಕ ಚಿಂತನೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಅವಶ್ಯಕವೆಂದು ವಿವರಿಸಿದರು.

ವಿಶೇಷವಾಗಿ ವಿದ್ಯಾರ್ಥಿನಿಯರೊಂದಿಗೆ ಪ್ರತ್ಯೇಕವಾಗಿ ಸಂವಾದ ನಡೆಸಿ, ಅವರ ವೈಯಕ್ತಿಕ ಹಾಗೂ ಆರೋಗ್ಯ ಸಂಬಂಧಿತ ಸಮಸ್ಯೆಗಳ ಬಗ್ಗೆ ಚರ್ಚಿಸಿ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನವನ್ನು ನೀಡಿದರು.

ಈ ಸಂದರ್ಭದಲ್ಲಿ ಶಾಲಾ ಸಂಚಾಲಕರಾದ ಶ್ರೀಯುತ ಸಂತೋಷ್ ಶೆಟ್ಟಿ, ಆಡಳಿತಾಧಿಕಾರಿಯಾದ ಶ್ರೀಮತಿ ಆಶಾ ಶೆಟ್ಟಿ, ವಿದ್ಯಾರ್ಥಿಗಳು, ಶಿಕ್ಷಕ-ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಉಪ ಪ್ರಾಂಶುಪಾಲರಾದ ಶ್ರೀಮತಿ ವನಿತಾ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

Related Articles

Back to top button
error: Content is protected !!