ಶಿಕ್ಷಣ

ಬಸ್ರೂರು ಶ್ರೀ ಶಾರದಾ ಕಾಲೇಜು “ಕಾರಂತ ದೀವಿಗೆ- 2024”

Views: 48

ಕನ್ನಡ ಕರಾವಳಿ ಸುದ್ಧಿ ಕುಂದಾಪುರ: ಶ್ರೀ ಶಾರದಾ ಕಾಲೇಜು ಬಸ್ಸೂರು  ಇಲ್ಲಿನ ಕನ್ನಡ ವಿಭಾಗ ಮತ್ತು ಸಾಹಿತ್ಯ ಸಂಘ ಇದರ ಆಶ್ರಯದಲ್ಲಿ ಕಾರಂತರ ಜನ್ಮ ದಿನಾಚರಣೆ ಪ್ರಯುಕ್ತ ಉಡುಪಿ ಜಿಲ್ಲಾ ಮಟ್ಟದ ಒಂದು ದಿನದ ಪದವಿ ಕಾಲೇಜಿನ ವಿದ್ಯಾರ್ಥಿಗೆ ರಸಪ್ರಶ್ನೆ ಸ್ಪರ್ಧೆ ಮತ್ತು ಪ್ರಬಂದ ಮಂಡನೆ ಕಾರ್ಯಕ್ರಮ ಕಾಲೇಜಿನ ವೀರ ರಾಜೇಂದ್ರ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ, ಕವಿಯತ್ರಿ ಶ್ರೀಮತಿ ಸುಕನ್ಯಾ ಕಳಸ ಕಾರಂತರು ಸರ್ವಕಾಲಿಕ ಶ್ರೇಷ್ಠ ಸಾಹಿತಿ ಮತ್ತು ತಮ್ಮ ಕಾವ್ಯಗಳಲ್ಲಿ ವೈಚಾರಿಕ ವಿಚಾರಧಾರೆಗಳ ಬಗ್ಗೆ ಹೆಚ್ಚಿನ ಗಮನಹರಿಸಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ವಹಿಸಿದ್ದರು.ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ರವಿಚಂದ್ರ, ಕಾರ್ಯಕ್ರಮ ಸಂಯೋಜಕರಾದ ಮಮತಾ, ಕನ್ನಡ ಉಪನ್ಯಾಸಕರು ಹಾಗೂ ವಿದ್ಯಾರ್ಥಿ ಪ್ರತಿನಿದಿ ಕುಮಾರಿ ನೀಶಾ ಉಪಸ್ಥಿತರಿದ್ದರು.

ಸಮಾರೋಪ: ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿನಿ ಲೇಖಕಿ ಶ್ರೀಮತಿ ವಿಜಯಶ್ರೀ ಎಂ ಭಾಗವಹಿಸಿ ಕಾರಂತರ ಕೃತಿಗಳ ಬಗ್ಗೆ ವಿಶ್ಲೇಷಿಸಿದರು .ಉಡುಪಿ ಜಿಲ್ಲೆಯ ವಿವಿಧ ಪದವಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.ಪ್ರಬಂದ ಮಂಡನೆ ಕಾರ್ಯಕ್ರಮದ ಸಮನ್ವಯಕಾರರಾಗಿ ಉಪನ್ಯಾಸಕಿ ಶ್ರೀಮತಿ ರೇಷ್ಮಾ ಶೆಟ್ಟಿ ಮತ್ತು ರಸಪ್ರಶ್ನೆ ಸ್ಪರ್ಧೆಯನ್ನು ಉಪನ್ಯಾಸಕ ಅಕ್ಷಯ ಹೆಗ್ಡೆ ನಿರ್ವಹಿಸಿದರು. ಕಾರ್ಯಕ್ರಮವನ್ನು ಇತಿಹಾಸ ಉಪನ್ಯಾಸಕ ಶ್ರೀ ರಾಘವೇಂದ್ರ ಶೆಟ್ಟಿ ಸ್ವಾಗತಿಸಿ, ಉಪನ್ಯಾಸಕಿಯರಾದ ಶ್ರೀಮತಿ ಪ್ರಮೀಳಾ, ಮತ್ತು ಶ್ರೀಮತಿ ಅನಿತಾ ಎನ್ ನಿರ್ವಹಿಸಿದರು. ಸಂಯೋಜಕರಾದ ಮಮತಾ ವಂದಿಸಿದರು.

Related Articles

Back to top button