ಬಸ್ರೂರು ಶ್ರೀ ಶಾರದಾ ಕಾಲೇಜು:ಎನ್ ಎನ್ ಎಸ್ ಶಿಬಿರ ಉದ್ಘಾಟನೆ
"ಎನ್ ಎಸ್ ಎಸ್ ಶಿಬಿರದಿಂದ ಶಿಬಿರಾರ್ಥಿಗಳ ವ್ಯಕ್ತಿತ್ವ ವಿಕಸನ ಮತ್ತು ಪರೋಪಕಾರ ಗುಣಗಳನ್ನು ಹೊಂದಲು ಸಾಧ್ಯ"----ಸಚ್ಚಿದಾನಂದ ಛಾತ್ರ

Views: 146
ಕನ್ನಡ ಕರಾವಳಿ ಸುದ್ದಿ: ಬಸ್ರೂರು ಶ್ರೀ ಶಾರದಾ ಕಾಲೇಜು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಳ್ಳೂರು ಸಿದ್ಧಾಪುರ ಇಲ್ಲಿ ಏಳು ದಿನಗಳ ವಾರ್ಷಿಕ ಶಿಬಿರ ಉದ್ಘಾಟಿಸಲಾಯಿತು.
ಶಿಬಿರವನ್ನು ಕಮಲಶಿಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಧರ್ಮದರ್ಶಿ ಶ್ರೀ ಸಚ್ಚಿದಾನಂದ ಛಾತ್ರ ಉದ್ಘಾಟಿಸಿ, ‘ಎನ್ ಎಸ್ ಎಸ್ ಶಿಬಿರದಿಂದ ಶಿಬಿರಾರ್ಥಿಗಳ ವ್ಯಕ್ತಿತ್ವ ವಿಕಸನ ಮತ್ತು ಪರೋಪಕಾರ ಗುಣಗಳನ್ನು ಹೊಂದಲು ಸಾಧ್ಯ’ ಎಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪ್ರೊ ರಾಧಾಕೃಷ್ಣ ಶೆಟ್ಟಿ ಮತ್ತು ಡಾ ದಿನೇಶ್ ಹೆಗ್ಡೆ, ಸಂಪಿಗೆಡಿ ಸಂಜೀವ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯರು, ಎಸ್ ಡಿ ಎಂ ಸಿ ಅಧ್ಯಕ್ಷರು, ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಮುಂತಾದವರು ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ ಚಂದ್ರಾವತಿ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ರಾಷ್ಟ್ರೀಯ ಸೇವಾ ಯೋಜನಾ ಅಧಿಕಾರಿ ಶ್ರೀ ರಾಘವೇಂದ್ರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಇತಿಹಾಸ ಉಪನ್ಯಾಸಕರಾದ ಶ್ರೀ ರಾಘವೇಂದ್ರ ಶೆಟ್ಟಿ ನಿರೂಪಿಸಿದರು. ಶಿಬಿರಾರ್ಥಿ ಕೀರ್ತಿಕಾ ವಂದಿಸಿದರು.