ಶಿಕ್ಷಣ

ಬಸ್ರೂರು ಶ್ರೀ ಶಾರದಾ ಕಾಲೇಜು: ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ 

Views: 137

ಕನ್ನಡ ಕರಾವಳಿ ಸುದ್ದಿ: ಬಸ್ರೂರು ಶ್ರೀ ಶಾರದಾ ಕಾಲೇಜು ಇಲ್ಲಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಕಾಲೇಜಿನ ವತಿಯಿಂದ ಸ್ವಾಗತ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಸೃಷ್ಟಿ ಇನ್ಫೋಟೆಕ್ ಇದರ ಮ್ಯಾನೇಜಿಂಗ್ ಡೈರೆಕ್ಟರ್ ಆದ ಶ್ರೀ ಹರ್ಷವರ್ಧನ್ ಶೆಟ್ಟಿ ಉದ್ಘಾಟಿಸಿ, ವಿದ್ಯಾರ್ಥಿಗಳು ತಮ್ಮ ಪದವಿ ಶಿಕ್ಷಣದ ಪ್ರಥಮ ವರ್ಷದಿಂದಲೇ ಕಾಲೇಜಿನ ಎಲ್ಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರ ಮೂಲಕ ಅಂತಿಮ ವರ್ಷಕ್ಕೆ ತಲುಪಿದಾಗ ಅವರ ವ್ಯಕ್ತಿತ್ವ ವಿಕಸನ ಹಾಗೂ ನೇಮಕಾತಿ ಪ್ರಕ್ರಿಯೆಗಳಲ್ಲಿ ಪಾಲ್ಗೊಳುವುದರ ಮುಖಾಂತರ ಉತ್ತಮ ಕಂಪನಿಯಲ್ಲಿ ಉದ್ಯೋಗ ಪಡೆಯಲು ಸಾಧ್ಯ ಎಂದು ಕಿವಿಮಾತು ಹೇಳಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಚಂದ್ರಾವತಿ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದ್ದರು, ಐಕ್ಯುಎಸಿ ಸಂಚಾಲಕರಾದ ಶ್ರೀ ಸಂದೀಪ್ ಕೆ ಮತ್ತು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀ ಸೂರಜ್ ಕುಮಾರ್ ಶೆಟ್ಟಿ ಬಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕೀರ್ತನ ತೃತೀಯ ಬಿಎ ನಿರೂಪಿಸಿ, ಕುಮಾರಿ ಸುಮಾನ ತೃತೀಯ ಬಿಎ ಪ್ರಾರ್ಥಿಸಿ, ಕುಮಾರಿ ಸೌಮ್ಯ ತೃತೀಯ ಬಿಕಾಂ ಧನ್ಯವಾದಗೈದರು.

Related Articles

Back to top button
error: Content is protected !!