ಶಿಕ್ಷಣ

ಬಸ್ರೂರು ಶ್ರೀ ಶಾರದಾ ಕಾಲೇಜು: ಸಿ ಎಸಿ ಎಸ್ ಓರಿಯೆಂಟೇಶನ್ ಕಾರ್ಯಕ್ರಮ

Views: 19

ಕನ್ನಡ ಕರಾವಳಿ ಸುದ್ದಿ: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿನ ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ವಿಭಾಗದ ವತಿಯಿಂದ ಪ್ರಥಮ ವರ್ಷದ ಸಿ ಎಸಿ ಎಸ್ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಕಾಲೇಜಿನ ಟ್ರಸ್ಟಿಗಳಾದ ಶ್ರೀಮತಿ ಅನುಪಮಾ ಎಸ್ ಶೆಟ್ಟಿ ಉದ್ಘಾಟಿಸಿದರು ಅವರು ಮಾತನಾಡಿ, ಸಿಎ ಮತ್ತು ಸಿ ಎಸ್ ನಂತಹ ವೃತ್ತಿಪರ ಕೋರ್ಸ್ ಗಳನ್ನು ಪದವಿಯ ಜೊತೆಗೆ ಅಧ್ಯಯನ ಮಾಡುವುದರಿಂದ ವಿದ್ಯಾರ್ಥಿಗಳು ಉದ್ಯೋಗ ಮಾರುಕಟ್ಟೆಯಲ್ಲಿ ಉತ್ತಮ ಉದ್ಯೋಗ ಪಡೆಯಲು ಸಾಧ್ಯ ಮತ್ತು ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಕಾಲೇಜಿನಲ್ಲಿ ನೀಡಲಾಗುತ್ತಿರುವ ತರಬೇತಿಯನ್ನು ಪಡೆಯುವುದರ ಮುಖಾಂತರ ಹೆಚ್ಚು ಜ್ಞಾನಾರ್ಜನೆಯನ್ನು ಮಾಡಿಕೊಳ್ಳಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕುಂದಾಪುರದ ಕರಿಯರ್ ಕೋಚಿಂಗ್ ಸಂಸ್ಥೆಯ ಸ್ಥಾಪಕ ಸಿಎ ರಾಜೇಶ್ ಶೆಟ್ಟಿ ಮತ್ತು ಸಿಎ ನಾಗೇಶ್ ಆರ್ ನಾಯ್ಕ್ ಭಾಗವಹಿಸಿ ವಿದ್ಯಾರ್ಥಿಗಳಿಗೆ ಸಿ ಎ ಮತ್ತು ಸಿ ಎಸ್ ಕೋರ್ಸ್ ಗಳ ಬಗ್ಗೆ ಮಾಹಿತಿ ನೀಡಿದರು

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಐ ಕ್ಯು ಎ ಸಿ ಸಂಚಾಲಕರಾದ ಶ್ರೀ ಸಂದೀಪ್ ಕೆ ಅತಿಥಿಗಳನ್ನು ಸ್ವಾಗತಿಸಿದರು, ಕಾರ್ಯಕ್ರಮದ ಸಂಯೋಜಕರು ಮತ್ತು ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ. ರವಿಚಂದ್ರ ಪ್ರಾಸ್ತಾವಿಸಿ, ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿದರು.

ಕಾರ್ಯಕ್ರಮವನ್ನು ತೃತೀಯ ಬಿಕಾಂ ವಿದ್ಯಾರ್ಥಿನಿ ಕುಮಾರಿ ಸೌಮ್ಯ ನಿರೂಪಿಸಿದರು. ಕುಮಾರಿ ಶ್ರೀನಿಧಿ ತೃತೀಯ ಬಿಕಾಂ ವಂದಿಸಿದರು.

Related Articles

Back to top button
error: Content is protected !!