ಶಿಕ್ಷಣ

ಬಸ್ರೂರು ಶ್ರೀ ಶಾರದಾ ಕಾಲೇಜು:ಪ್ರಥಮ ಚಿಕಿತ್ಸಾ ಕಾರ್ಯಗಾರ

Views: 46

ಕನ್ನಡ ಕರಾವಳಿ ಸುದ್ದಿ: ಬಸ್ರೂರು ಶ್ರೀ ಶಾರದಾ ಕಾಲೇಜು ಪದವಿ ವಿದ್ಯಾರ್ಥಿಗಳಿಗೆ ಕಾಲೇಜಿನ ಯೂತ್ ರೆಡ್ ಕ್ರಾಸ್ ಘಟಕ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಘಟಕದ ಜಂಟಿ ಆಶ್ರಯದಲ್ಲಿ ಪ್ರಥಮ ಚಿಕಿತ್ಸಾ ಕಾರ್ಯಗಾರ ಜರಗಿತು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರದ ಘಟಕಾಧ್ಯಕ್ಷ ಶ್ರೀ ಎಸ್ ಜಯಕರ್ ಶೆಟ್ಟಿ ರೆಡ್ ಕ್ರಾಸ್ ಸಂಸ್ಥೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಡಾ ಸೋನಿ ಡಿಕೋಸ್ಟ ಮೆಡಿಕಲ್ ಆಫೀಸರ್ ಇಶಾನಿ ಮೆಡಿಕಲ್ ಸೆಂಟರ್ ಕುಂದಾಪುರ ಇವರು ವಿದ್ಯಾರ್ಥಿಗಳಿಗೆ ಪ್ರಥಮ ಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಿ ಮಾದರಿಯ ಮೂಲಕ ವಿವರಿಸಿದರು. ಡಾ. ಚಂದ್ರಾವತಿ ಶೆಟ್ಟಿ ಪ್ರಾಂಶುಪಾಲರು ಅಧ್ಯಕ್ಷತೆಯನ್ನು ವಹಿಸಿದ್ದರು. ಜೂನಿಯರ್ ರೆಡ್ ಕ್ರಾಸ್ ಕುಂದಾಪುರ ಘಟಕದ ಸಂಯೋಜಕರಾದ ಶ್ರೀ ದಿನಕರ ಶೆಟ್ಟಿ ಉಪಸ್ಥಿತರಿದ್ದರು. ಕಾಲೇಜಿನ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಶ್ರೀ ಮುರಳೀಧರ ಹೆಗ್ಡೆ ಸ್ವಾಗತಿಸಿ, ಪ್ರಥಮ ಬಿಎ ವಿದ್ಯಾರ್ಥಿನಿ ದಿವ್ಯ ಮತ್ತು ಮಾಧವಿ ಪ್ರಾರ್ಥಿಸಿ ತೃತೀಯ ಬಿ.ಕಾಂ ವಿದ್ಯಾರ್ಥಿನಿ ಸೌಮ್ಯ ಕಾರ್ಯಕ್ರಮ ನಿರೂಪಿಸಿದರು. ಬೋಧಕರು ಬೋಧಕೇತರರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

 

Related Articles

Back to top button
error: Content is protected !!