ಬಸ್ರೂರು ಶ್ರೀ ಶಾರದಾ ಕಾಲೇಜು:ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
Views: 36
ಕನ್ನಡ ಕರಾವಳಿ ಸುದ್ದಿ: ಬಸ್ರೂರು ಶ್ರೀ ಶಾರದಾ ಕಾಲೇಜು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ಶೈಕ್ಷಣಿಕ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು
ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀಮತಿ ಸಂಧ್ಯಾ ನಾಯಕ್ ಉಪನ್ಯಾಸಕರು ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇವರು ಮಾತನಾಡಿ ರಾಷ್ಟ್ರೀಯ ಸೇವಾ ಯೋಜನೆಯಿಂದ ವಿದ್ಯಾರ್ಥಿಗಳು ಶಿಸ್ತು, ಶ್ರಮ, ವ್ಯಕ್ತಿತ್ವ ವಿಕಸನ, ಸಹಬಾಳ್ವೆ ಯಂತಹ ಜೀವನ ಮೌಲ್ಯಗಳು ಕಲಿಯಲು ಇರುವ ವೇದಿಕೆಯಾಗಿದೆ ವಿದ್ಯಾರ್ಥಿಗಳು ಆ ನಿಟ್ಟಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮುಖಾಂತರ ಸಮುದಾಯ ಮತ್ತು ದೇಶದ ಅಭಿವೃದ್ಧಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬಹುದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ. ರವಿಚಂದ್ರ ಪ್ರಾಸ್ತಾವಿಸಿ ಸ್ವಾಗತಿಸಿದರು. ಕಾಲೇಜಿನ ಆಡಳಿತ ಅಧಿಕಾರಿ ಡಾ. ಮೋಹನ್ ಕೆ . ಎನ್ ಉಪಸ್ಥಿತರಿದ್ದರು. ಎನ್ಎಸ್ಎಸ್ ಸಹ ಯೋಜನಾಧಿಕಾರಿ ಕುಮಾರಿ ಮನವಿ ಕೆ ಕೆ ವಂದಿಸಿದರು, ಎನ್ಎಸ್ಎಸ್ ಸ್ವಯಂಸೇವಕರಾದ ಪ್ರಗತಿ ಮತ್ತು ತಂಡದವರು ಎನ್ಎಸ್ಎಸ್ ಗೀತೆಯನ್ನು ಹಾಡಿದರು ಹಾಗೂ ಸ್ವಯಂಸೇವಕಿ ಶಶಿಕಲಾ ದ್ವಿತೀಯ ಬಿಸಿಎ ನಿರೂಪಿಸಿದರು.








