ಬಸ್ರೂರು ಶ್ರೀ ಶಾರದಾ ಕಾಲೇಜು: ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ
Views: 30
ಕನ್ನಡ ಕರಾವಳಿ ಸುದ್ದಿ: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಎನ್ ಸಿ ಸಿ, ರೋವರ್ ರೇಂಜರ್, ರೆಡ್ ಕ್ರಾಸ್ ಘಟಕಗಳ ಆಶ್ರಯದಲ್ಲಿ ಹಾಗೂ ಬಸ್ರೂರು ಗ್ರಾಮ ಪಂಚಾಯತ್ ಮತ್ತು ಭಾರತೀಯ ಆಟೋರಿಕ್ಷಾ ಮಜದೂರ್ ಸಂಘ ಬಸ್ರೂರು ಶಾಖೆ ಇವುಗಳ ಸಹಯೋಗದಲ್ಲಿ ಮಹಾತ್ಮ ಗಾಂಧೀಜಿಯವರ ಜನ್ಮ ದಿನಾಚರಣೆಯ ಅಂಗವಾಗಿ ಬಸ್ರೂರು ಪೇಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಕೈಗೊಳ್ಳಲಾಯಿತು.
ಸ್ವಚ್ಛತಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಸ್ರೂರು ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಚಂದ್ರ ಬಿಲ್ಲವ ಗಾಂಧೀಜಿಯವರ ಸ್ವಚ್ಛ ಭಾರತ್ ಕನಸಿಗೆ ಪೂರಕವಾಗಿ ನಾವೆಲ್ಲರೂ ಸ್ವಚ್ಛತೆಯ ಕಡೆಗೆ ಗಮನಹರಿಸಿ ನಮ್ಮ ಅಕ್ಕಪಕ್ಕ ಸ್ವಚ್ಛ ಪರಿಸರ ರೂಪಿಸಬೇಕು ಹಾಗೂ ಸಮಾಜದಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ಕೆಲಸ ವಿದ್ಯಾರ್ಥಿಗಳಿಂದ ಆಗಲಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಭಾರತೀಯ ಆಟೋರಿಕ್ಷಾ ಮಜದೂರ್ ಸಂಘ ಬಸ್ರೂರು ಶಾಖೆಯ ಅಧ್ಯಕ್ಷರಾದ ಶ್ರೀ ನಿತೀಶ್ ಪೂಜಾರಿ ಹಾಗೂ ಶ್ರೀ ಶಾರದಾ ಕಾಲೇಜ್ ಬಸ್ರೂರು ಇದರ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ಹಾಗೂ ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಂಗವಾಗಿ ಬಸ್ರೂರು ಬಸ್ ನಿಲ್ದಾಣ, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.









