ಶಿಕ್ಷಣ
ಬಸ್ರೂರು ಶ್ರೀ ಶಾರದಾ ಕಾಲೇಜು:ರೋವರ್ಸ್ ಮತ್ತು ರೇಂಜರ್ಸ್ ಘಟಕದ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನೆ
Views: 52
ಕನ್ನಡ ಕರಾವಳಿ ಸುದ್ದಿ: ಬಸ್ರೂರು ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿನ 2025 – 26ನೇ ಶೈಕ್ಷಣಿಕ ಸಾಲಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಕಾಲೇಜಿನ ಎ. ವಿ. ಹಾಲಿನಲ್ಲಿ ಜರುಗಿತು.
ಉದ್ಘಾಟಕರಾಗಿ ಬಿದ್ಕಲ್ ಕಟ್ಟೆಯ ಸರಕಾರಿ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕರಾದ ಶ್ರೀ ಭಾಸ್ಕರ್ ಉಡುಪ ಇವರು ಆಗಮಿಸಿ ವಿದ್ಯಾರ್ಥಿಗಳಿಗೆ ರೋವರ್ ರೇಂಜರ್ ಘಟಕದ ಸೇವೆಯ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಡಾ. ಚಂದ್ರಾವತಿ ಶೆಟ್ಟಿ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಅಧಿಕಾರಿ ಡಾ. ಮೋಹನ್ ಕೆ ಎನ್, ಉಪನ್ಯಾಸಕರು, ಘಟಕದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
RSL ರಾಘವೇಂದ್ರ ಎಚ್ ಸ್ವಾಗತಿಸಿ,ಪ್ರಾಸ್ತಾವಿಕ ನುಡಿಗಳನ್ನಾಡಿದರು. RL ಮಮತಾ ವಂದಿಸಿದರು. ಸೀನಿಯರ್ ರೋವರ್ ಮೇಟ್ ಶ್ರೀ ವರ್ಧನ್ ಕನ್ನಂತ ಕಾರ್ಯಕ್ರಮವನ್ನು ನಿರೂಪಿಸಿದರು.






