ಶಿಕ್ಷಣ

ಬಸ್ರೂರು ಶ್ರೀ ಶಾರದಾ ಕಾಲೇಜು: ಲಲಿತ ಕಲಾ ಸಂಘದ ಆಶ್ರಯದಲ್ಲಿ ಪ್ರತಿಭಾ ಪ್ರದರ್ಶನ

Views: 208

ಕನ್ನಡ ಕರಾವಳಿ ಸುದ್ದಿ: ಬಸ್ರೂರು ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿನ ಲಲಿತ ಕಲಾ ಸಂಘದ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ, ವಿದುಷಿ ಕಲಾಶ್ರೀ ಪುನೀತ್ ಕಲೆ ಎನ್ನುವುದು ಯಾವುದೇ ವ್ಯಕ್ತಿಯ ಸ್ವತ್ತಲ್ಲ ಕಠಿಣ ಪರಿಶ್ರಮದಿಂದ ಇದನ್ನು ತಮ್ಮದಾಗಿಸಿಕೊಳ್ಳಬಹುದು ಆ ಮೂಲಕ ಕಲೆಯು ಜೀವನವನ್ನು ಕಟ್ಟಿಕೊಡುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಶ್ರೀಮತಿ ಅನುಪಮಾ ಎಸ್ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ,  ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ದಿನಗಳಲ್ಲಿ ಆಸಕ್ತಿದಾಯಕ ವಿಷಯಗಳನ್ನು ಕಲಿತು ಸಮಯವನ್ನು ಹಾಳು ಮಾಡಿಕೊಳ್ಳದೆ ಕಾಲೇಜಿನಲ್ಲಿ ಸಿಗುವ ಅವಕಾಶವನ್ನು ಉಪಯೋಗಿಸಿಕೊಳ್ಳುವ ಮೂಲಕ ತಮ್ಮ ವ್ಯಕ್ತಿತ್ವವನ್ನು ತಾವೇ ರೂಪಿಸಿಕೊಳ್ಳ ಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ, ಆಡಳಿತ ಅಧಿಕಾರಿ ಡಾ ಮೋಹನ್ ಕೆಎನ್ , ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀ ಸೂರಜ್ ಕುಮಾರ್ ಶೆಟ್ಟಿ ಬಿ, ಲಲಿತ ಕಲಾ ಸಂಘದ ಸಂಯೋಜಕ ಹಾಗೂ ಕನ್ನಡ ವಿಭಾಗ ಮುಖ್ಯಸ್ಥ ಶ್ರೀಕುಮಾರ್ ಪಿ ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದ ನಂತರ ತರಗತಿ ವಾರು ವಿದ್ಯಾರ್ಥಿಗಳಿಂದ ವೈವಿಧ್ಯಮಯ ಪ್ರತಿಭಾ ಪ್ರದರ್ಶನ ನಡೆಯಿತು.

ಲಲಿತ ಕಲಾ ಸಂಘದ ಸಂಯೋಜಕ ಶ್ರೀಕುಮಾರ್ ಪಿ. ಅತಿಥಿಗಳನ್ನು ಸ್ವಾಗತಿಸಿ ಪ್ರಸ್ತಾಪಿಸಿದರು. ವಿದ್ಯಾರ್ಥಿನಿ ಸೌಮ್ಯ ಅಂತಿಮ ಬಿಕಾಂ ನಿರೂಪಿಸಿದರು.

Related Articles

Back to top button
error: Content is protected !!