ಶಿಕ್ಷಣ

ಬಸ್ರೂರು ಶ್ರೀ ಶಾರದಾ ಕಾಲೇಜು: ‘ಸ್ಪೀಕ್ ಸ್ಮಾರ್ಟ್, ಸಕ್ಸೀಡ್ ಫಾಸ್ಟರ್’ ವಿಶೇಷ ಉಪನ್ಯಾಸ ಕಾರ್ಯಕ್ರಮ

ಜ್ಞಾನ ವ್ಯಕ್ತಪಡಿಸುವ ಶೈಲಿಯನ್ನು ವಿದ್ಯಾರ್ಥಿಗಳು ಕರಗತ ಮಾಡಿಕೊಂಡರೆ ಮಾತ್ರ ಸಂದರ್ಶನಗಳಲ್ಲಿ ಯಶಸ್ಸು ಗಳಿಸಲು ಸಾಧ್ಯ---- ಡಾ. ಗಣೇಶ್ ಪ್ರಸಾದ್ ಜಿ. ನಾಯಕ್

Views: 0

ಕನ್ನಡ ಕರಾವಳಿ ಸುದ್ದಿ: ಸಂವಹನ ಕೌಶಲ್ಯಗಳನ್ನು ಚಿಕ್ಕ ವಯಸ್ಸಿನಿಂದಲೇ ಮೈಗೂಡಿಸಿಕೊಂಡರೆ ವಿದ್ಯಾರ್ಥಿ ಜೀವನದಲ್ಲಿ ಯಶಸ್ಸಿನ ಮೆಟ್ಟಿಲುಗಳನ್ನೇರಲು ಇಂಧನ ಒದಗಿಸಿದಂತಾಗುತ್ತದೆ ಎಂದು ಉಪನ್ಯಾಸಕ ಡಾ. ಗಣೇಶ್ ಪ್ರಸಾದ್ ಜಿ. ನಾಯಕ್ ಹೇಳಿದರು.

ಅವರು ಮಾರ್ಚ್ 24 ರಂದು ಬಸ್ರೂರಿನ ಶ್ರೀ ಶಾರದಾ ಕಾಲೇಜಿನಲ್ಲಿ ವಾಣಿಜ್ಯ ಮತ್ತು ನಿರ್ವಹಣಾಶಾಸ್ತ್ರ ವಿಭಾಗ, ಐಕ್ಯೂಎಸಿ ಆಶ್ರಯದಲ್ಲಿ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಸ್ಪೀಕ್ ಸ್ಮಾರ್ಟ್, ಸಕ್ಸೀಡ್ ಫಾಸ್ಟರ್’ ಕುರಿತು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಜ್ಞಾನ ಎಷ್ಟೇ ಇದ್ದರೂ ಅದನ್ನು ವ್ಯಕ್ತಪಡಿಸುವ ಶೈಲಿಯನ್ನು ವಿದ್ಯಾರ್ಥಿಗಳು ಕರಗತ ಮಾಡಿಕೊಂಡರೆ ಮಾತ್ರ ಉದ್ಯೋಗ ಆಧಾರಿತ ಸಂದರ್ಶನಗಳಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ಅವರು, ಲಭ್ಯವಿರುವ ಸಂಪನ್ಮೂಲಗಳನ್ನು ಸದುಪಯೋಗಿಸಿಕೊಂಡು ಉತ್ತಮ ವ್ಯಕ್ತಿತ್ವವನ್ನು ರೂಪಿಸಿ ಸಂವಹನ ಕೌಶಲ್ಯಗಳನ್ನು ಪರಿಣಾಮಕಾರಿಯಾಗಿ ಅಭಿವೃದ್ಧಿಪಡಿಸಿಕೊಂಡರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದರು. ಐಕ್ಯೂಎಸಿ ಸಂಯೋಜಕರಾದ ಸಂದೀಪ್ ಕೆ ವಂದಿಸಿದರು. ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರಾದ ಡಾ.ರವಿಚಂದ್ರ ಸ್ವಾಗತಿಸಿ,ಕಾರ್ಯಕ್ರಮ ನಿರೂಪಿಸಿದರು.

Related Articles

Back to top button
error: Content is protected !!