ಸಾಂಸ್ಕೃತಿಕ

ಬಸ್ರೂರು ಶ್ರೀ ಶಾರದಾ ಕಾಲೇಜು: ಭಂಡಾರಕಾರ್ಸ್ ಪದವಿಪೂರ್ವ ಕಾಲೇಜು ಮಡಿಲಿಗೆ ಅರುಣ್ಯಾ-2024

Views: 13

ಕನ್ನಡ ಕರಾವಳಿ ಸುದ್ದಿ:  ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿ ಉಡುಪಿ ಜಿಲ್ಲಾ ಮಟ್ಟದ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ನೆಡೆದ ಆರುಣ್ಯಾ 2024  ಮ್ಯಾನೆಜ್ ಮೆಂಟ್ ಸ್ಪರ್ಧೆ ಸಮಾರೋಪ ಕಾರ್ಯಕ್ರಮ ಕಾಲೇಜಿನ ಶ್ರೀ ವೀರರಾಜೇಂದ್ರ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಗಣೇಶ ಶೆಟ್ಟಿ ಮೊಳಹಳ್ಳಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ದಿಸೆಯಲ್ಲಿ ಕಾಲೇಜಿನ ಬೇರೆ ಬೇರೆ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ತಮ್ಮ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಚಂದ್ರಾವತಿ ಶೆಟ್ಟಿ ವಹಿಸಿದ್ದರು.ಕಾರ್ಯಕ್ರಮದಲ್ಲಿ ಶಾರದಾ ಪಿಯು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನಾರಾಯಣ ಪೈ, ಐಕ್ಯೂಎಸಿ ಸಂಚಾಲಕರಾದ ಶ್ರೀ ಸಂದೀಪ್ ಕೆ ಉಪಸ್ಥಿತರಿದ್ದರು.ಆರುಣ್ಯಾ2024 ಸಂಚಾಲಕರು ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ ರವಿಚಂದ್ರ ಧನ್ಯವಾದ ಅರ್ಪಿಸಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀ ಕುಮಾರ ಪಿ ಸ್ವಾಗತಿಸಿದರು. ಕನ್ನಡ ಉಪನ್ಯಾಸಕಿ ಶ್ರೀಮತಿ ಪ್ರಮೀಳಾ ಮತ್ತು ಅರ್ಥಶಾಸ್ತ್ರ ಉಪನ್ಯಾಸಕ ಅಕ್ಷಯ ಹೆಗ್ಡೆ, ಮತ್ತು ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ ವಿಶ್ವನಾಥ ಆಚಾರ್ಯ ನಿರ್ವಹಿಸಿದರು.

ಅಂತರ್ ಕಾಲೇಜು ಸ್ವರ್ಧೆ ಯಲ್ಲಿ ಭಂಡಾರ್ಕರ್ ಪಿಯು ಕಾಲೇಜು ಚಾಂಪಿಯನ್ ಶಿಪ್ ಆಗಿ ಪ್ರಥಮ ಬಹುಮಾನ ಪಡೆದರು , ರನ್ಸಸ್ ಆಗಿ ಉಡುಪಿ ಪೂರ್ಣಪ್ರಜ್ಞ ಪಿಯು ಕಾಲೇಜು ಬಹುಮಾನ ಪಡೆದುಕೊಂಡರು.

Related Articles

Back to top button
error: Content is protected !!