ಶಿಕ್ಷಣ
ಬಸ್ರೂರು ಶ್ರೀ ಶಾರದಾ ಕಾಲೇಜು: ಕಾನೂನು ಮಾಹಿತಿ ಕಾರ್ಯಕ್ರಮ

Views: 26
ಕನ್ನಡ ಕರಾವಳಿ ಸುದ್ದಿ: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿನ ಪದವಿ ವಿದ್ಯಾರ್ಥಿಗಳಿಗೆ ಕಾನೂನು ಮಾಹಿತಿ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕುಂದಾಪುರ ಗ್ರಾಮಾಂತರ ಪೋಲಿಸ್ ಠಾಣೆಯ ಪೊಲೀಸ್ ಅಧಿಕಾರಿ ಶ್ರೀ ಶೇಖರ್ ಭಾಗವಹಿಸಿ ವಿದ್ಯಾರ್ಥಿಗಳಿಗೆ ಕಾನೂನು ಮಾಹಿತಿ ನೀಡಿ, ವಿದ್ಯಾರ್ಥಿಗಳು ಯಾವುದೇ ಕಾನೂನು ಮೀರಿ ಹೋಗಬಾರದು ನಾವು ನಮ್ಮ ದೇಶದ ಕಾನೂನನ್ನು ಗೌರವಿಸಿದಾಗ ಕಾನೂನು ಪಾಲನೆ ಸಾದ್ಯ ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಕಾಲೇಜಿನ ಐಕ್ಯೂ ಏಸಿ ಸಂಚಾಲಕರಾದ ಶ್ರೀ ಸಂದೀಪ್ ಕೆ, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ವಿಶ್ವನಾಥ ಆಚಾರ್ಯ, ಸಾರ್ವಜನಿಕ ಸಂಪರ್ಕ ಅಧಿಕಾರಿ ಶ್ರೀ ಹರೀಶ್ ಕಾಂಚನ್ ಮತ್ತು ಎನ್ ಎಸ್ ಎಸ್ ಅಧಿಕಾರಿ ಶ್ರೀ ರಾಘವೇಂದ್ರ ಶೆಟ್ಟಿ ಎಸ್ ಉಪಸ್ಥಿತರಿದ್ದರು.