ಶಿಕ್ಷಣ
ಬಸ್ರೂರು ಶ್ರೀ ಶಾರದಾ ಪದವಿ ಪೂರ್ವ ಕಾಲೇಜು: ಎನ್.ಎಸ್.ಎಸ್ ಉದ್ಘಾಟನೆ
"ರಾಷ್ಟ್ರೀಯ ಸೇವಾ ಯೋಜನೆಯಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ" - ಡಾ.ರವಿಚಂದ್ರ

Views: 258
ಕನ್ನಡ ಕರಾವಳಿ ಸುದ್ದಿ: ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಬಸ್ರೂರು ಇದರ ಎನ್.ಎಸ್.ಎಸ್ ನ ವಾರ್ಷಿಕ ವಿಶೇಷ ಚಟುವಟಿಕೆಗಳನ್ನು ಶ್ರೀ ಶಾರದಾ ಪದವಿ ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ರವಿಚಂದ್ರ ಅವರು ಉದ್ಘಾಟಿಸಿ, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಎನ್.ಎಸ್.ಎಸ್ ನಂತಹ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ತಮ್ಮ ವ್ಯಕ್ತಿತ್ವವನ್ನು ವಿಕಸನಗೊಳಿಸಿಕೊಳ್ಳಬೇಕು ಎಂದರು.
ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನಾರಾಯಣ ಪೈ ಅಧ್ಯಕ್ಷತೆಯನ್ನು ವಹಿಸಿದ್ದರು.ರಾಜ್ಯ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಪ್ರತಿಮಾ ನಿರೂಪಿಸಿ, ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಕುಮಾರಿ ಶರಾವತಿ ಸ್ವಾಗತಿಸಿದರು. ಆಂಗ್ಲ ಭಾಷಾ ಉಪನ್ಯಾಸಕಿ ಶ್ರೀಮತಿ ಶ್ರೀಲತಾ ಅವರು ಅತಿಥಿ ಪರಿಚಯಮಾಡಿದರು . ಎನ್.ಎಸ್.ಎಸ್ ಅಧಿಕಾರಿ ಅಕ್ಷಯ ಹೆಗ್ಡೆ ಮೊಳಹಳ್ಳಿ ವಂದಿಸಿದರು.