ಶಿಕ್ಷಣ

ಬಸ್ರೂರು ಶ್ರೀ ಶಾರದ ಕಾಲೇಜು: ಮಾದಕ ದ್ರವ್ಯಗಳ ಸೇವನೆಯಿಂದ ಸಮಸ್ಯೆಗಳ ಬಗ್ಗೆ ಅರಿವು ಕಾರ್ಯಕ್ರಮ 

Views: 113

ಕನ್ನಡ ಕರಾವಳಿ ಸುದ್ದಿ: ಬಸ್ರೂರು ಶ್ರೀ ಶಾರದ ಕಾಲೇಜು ಇಲ್ಲಿ ಅಬಕಾರಿ ಇಲಾಖೆ ಕುಂದಾಪುರ ವಲಯ, ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ಮಾದಕ ದ್ರವ್ಯ ವಿರೋಧಿ ಸಮಿತಿ ಇವುಗಳ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯಗಳ ಸೇವನೆಯಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. 

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀ ಪ್ರಭುಗೌಡ ಪಾಟೀಲ್ ಡೆಪ್ಯೂಟಿ ಸೂಪರ್ಡೆಂಟ್ ಆಫ್ ಎಕ್ಸೈಸ್ಜ್ ಕುಂದಾಪುರ ಸಬ್ ಡಿವಿಷನ್ ಹಾಗೂ ಶ್ರೀ ರವಿನಾರಾಯಣ ಪಿಎಂ ಎಕ್ಸೈಸ್ ಇನ್ಸ್ಪೆಕ್ಟರ್ ಕುಂದಾಪುರ ವಲಯ ಇವರು ಆಗಮಿಸಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಸುದೀರ್ಘವಾಗಿ ವಿವರಿಸಿದರು. 

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಚಂದ್ರಾವತಿ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ನಶಾ ಮುಕ್ತ ಕಾರ್ಯಕ್ರಮದ ಅಂಗವಾಗಿ ನಡೆಯುವ ಈ ಕಾರ್ಯಕ್ರಮದ ಪ್ರಯೋಜನವನ್ನು ಪಡೆಯಬೇಕು ಆ ಮೂಲಕ ಮಾದಕ ವಸ್ತುಗಳನ್ನು ನಿರ್ಬಂಧಿಸಿ ಸ್ವಾಸ್ಥ ಸಮಾಜ ನಿರ್ಮಿಸುವ ಗುರಿ ಹೊಂದಿ ಎಂದು ಹೇಳಿದರು. 

ಕಾರ್ಯಕ್ರಮದಲ್ಲಿ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಕಾರ್ಯಕ್ರಮದ ಸಂಯೋಜಕರು ಆದ ಡಾ.ರವಿಚಂದ್ರ ಸ್ವಾಗತಿಸಿ ಪ್ರಾಸ್ತಾವಿಸಿದರು. 

ಕಾಲೇಜಿನ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಡಾ. ಮೋಹನ್ ಕೆ ಎನ್ ಉಪಸ್ಥಿತರಿದ್ದರು. ಆಂಗ್ಲ ಭಾಷಾ ಉಪನ್ಯಾಸಕಿ ಶ್ರೀಮತಿ ಶ್ವೇತಾ ನಿರೂಪಿಸಿ, ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥೆ ಕುಮಾರಿ ಮನವಿ ವಂದಿಸಿದರು.

Related Articles

Back to top button