ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಆಯ್ಕೆ: ಹೈಕೋರ್ಟ್ ಅಸಿಂಧುಗೊಳಿಸಿ ಆದೇಶ
Views: 25
ಕನ್ನಡ ಕರಾವಳಿ ಸುದ್ದಿ: ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಶಾಸಕರ ಆಯ್ಕೆ ಅಸಿಂಧು ಕೋರಿ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ಸಿ.ಮುನಿರಾಜು ಅವರು ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಎಂ.ಜಿ.ಎಸ್ ಕಮಲ್ ಅವರಿದ್ದ ಪೀಠವು, ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಆಯ್ಕೆಯನ್ನು ಅಸಿಂಧುಗೊಳಿಸಿದೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಎಸ್.ಎನ್. ಸುಬ್ಬಾರೆಡ್ಡಿ ಆಯ್ಕೆಯಾಗಿದ್ದರು. ಆದರೆ, ಚುನಾವಣೆ ವೇಳೆ ಎಸ್.ಎನ್. ಸುಬ್ಬಾರೆಡ್ಡಿ ಸಲ್ಲಿಸಿದ್ದ ನಾಮಪತ್ರ ದೋಷದಿಂದ ಕೂಡಿದೆ. ಆಸ್ತಿ ವಿವರಗಳನ್ನು ಮುಚ್ಚಿಟ್ಟು, ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದಾರೆ. ಅಲ್ಲೇ ತೆರಿಗೆ ಪಾವತಿ ಬಾಕಿ ಮಾಹಿತಿಯನ್ನು ಪ್ರಮಾಣಪತ್ರದಲ್ಲಿ ಉಲ್ಲೇಖಿಸಿಲ್ಲ. ಹೀಗಾಗಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಸಿ. ಮುನಿರಾಜು ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಜಾಗೊಳಿಸಲು ಎಸ್.ಎನ್. ಸುಬ್ಬಾರೆಡ್ಡಿ ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ಆದರೆ, ಇದೀಗ ಎಸ್.ಎನ್ ಸುಬ್ಬಾರೆಡ್ಡಿ ಆಯ್ಕೆಯನ್ನು ಹೈಕೋರ್ಟ್ ಅಸಿಂಧುಗೊಳಿಸಿ ಆದೇಶಿಸಿದೆ.






