ಬಾಡಿಗೆಗೆ ಬಂದವರು ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆ

Views: 0
ಎರಡು ತಿಂಗಳ ಹಿಂದೆಯಷ್ಟೇ ಬಾಡಿಗೆಗಾಗಿ ಬಂದ ಗಂಡ -ಹೆಂಡತಿ, ಇಬ್ಬರು ಮಕ್ಕಳು ಒಟ್ಟಿಗೆ ಶವವಾಗಿ ಮೈಸೂರಿನ ಬಾಡಿಗೆ ಮನೆಯಲ್ಲಿ ಪತ್ತೆಯಾಗಿದ್ದಾರೆ.
ಚಾಮುಂಡಿ ಬಡಾವಣೆಯಲ್ಲಿ ನೆಲೆಸಿದ್ದ ಒಂದೇ ಕುಟುಂಬದ ನಾಲ್ವರು ಧಾರುಣವಾಗಿ ಮೃತಪಟ್ಟವರಲ್ಲಿ ಮಹಾದೇವಸ್ವಾಮಿ( 48) ಅನಿತಾ (35 )ಮಕ್ಕಳಾದ ಚಂದ್ರಕಲಾ( 17) ಧನಲಕ್ಷ್ಮಿ( 15)ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದರು.
ಬಾಡಿಗೆ ಬಂದವರ ಬಗ್ಗೆ ಅಕ್ಕಪಕ್ಕದ ಮನೆಯವರಿಗೆ ಸರಿಯಾಗಿ ಗೊತ್ತಿರಲಿಲ್ಲ.
ಮಹದೇವಸ್ವಾಮಿ ಮೈಸೂರಿನಲ್ಲಿ ತರಕಾರಿ ಅಂಗಡಿ ಇಟ್ಟುಕೊಂಡು ವ್ಯಾಪಾರ ನಡೆಸುತ್ತಿದ್ದರು.
ಮಗಳು ಚಂದ್ರಕಲಾ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರೆ, ಉಳಿದವರ ಶವಗಳು ಕೆಳಗೆ ಬಿದ್ದಿವೆ. ಇವರೆಲ್ಲರೂ ಎರಡು ದಿನದ ಹಿಂದೆ ಸಾವನಪ್ಪಿದ್ದಾರೆ ಎಂದು ಶಂಕಿಸಲಾಗಿದೆ.
ಇಂದು ಕೊಳೆತ ವಾಸನೆಯಿಂದ ಅನುಮಾನಗೊಂಡ ಅಕ್ಕ ಪಕ್ಕದವರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.
ಕೆಆರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ತನಿಖೆ ನಂತರ ಈ ಕುಟುಂಬದ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ.






