ಧಾರ್ಮಿಕ

ಬಾರಕೂರು: ಅರ್ಚಕ ಸುಬ್ರಹ್ಮಣ್ಯ ಉಂಗ್ರಪಳ್ಳಿ ನಿಧನ

Views: 120

ಕನ್ನಡ ಕರಾವಳಿ ಸುದ್ದಿ: ಬಾರಕೂರು ಸಮೀಪ ಇತ್ತೀಚೆಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸುಬ್ರಹ್ಮಣ್ಯ ಉಂಗ್ರಪಳ್ಳಿ(71) ರವಿವಾರ ರಾತ್ರಿ ಮೃತಪಟ್ಟಿದ್ದಾರೆ.

ಮೃತರು ಪತ್ನಿ ಪುತ್ರ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಸುಬ್ರಹ್ಮಣ್ಯ ಉಂಗ್ರಪಳ್ಳಿ ಅವರು ಮಟಪಾಡಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ಭಜನ ಮಂಡಳಿ ನೇತೃತ್ವದಲ್ಲಿ ಹಲವು ವರ್ಷಗಳಿಂದ ಕುಣಿತ ಭಜನೆ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದರು. ಬಾರಕೂರು ಮಣಿಗಾರಕೇರಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು.

ಕರಾವಳಿ ಪದ್ಮಶಾಲಿಗರ ಮೂಲ ಕ್ಷೇತ್ರ ಬಾರ್ಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 200 ಕ್ಕೂ ಹೆಚ್ಚು ಸತ್ಯನಾರಾಯಣ ಪೂಜೆಯನ್ನು ನೆರವೇರಿಸಿ ಕೊಟ್ಟಿದ್ದರು. ದೇಗುಲದ ಆಡಳಿತ ಮೊಕ್ತೇಸರರಾದ ಬಾರಕೂರು ರಂಗನಕೇರಿ ಶ್ರೀನಿವಾಸ ಶೆಟ್ಟಿಗಾರ ಮತ್ತು ಆಡಳಿತ ಮಂಡಳಿಯವರು ಸಂತಾಪ ಸೂಚಿಸಿದ್ದಾರೆ.

Related Articles

Back to top button
error: Content is protected !!