ಶಿಕ್ಷಣ

ಬಾರ್ಕೂರು ನೇಶನಲ್ ಐಟಿಐ ಘಟಿಕೋತ್ಸವ ಹಾಗೂ ವಿದ್ಯಾರ್ಥಿ ವೇತನ ವಿತರಣೆ ಸಮಾರಂಭ

Views: 5

ಕನ್ನಡ ಕರಾವಳಿ ಸುದ್ದಿ: ಬಾರ್ಕೂರು ನೇಶನಲ್ ಐಟಿಐ ಕಾಲೇಜಿನಲ್ಲಿ 2025-26 ಸಾಲಿನಲ್ಲಿ ನಡೆದ ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪ್ರಮಾಣ ಪತ್ರ ವಿತರಿಸ ಲಾಯಿತು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಕಾರ್ಯಕ್ರಮ ಸೆಪ್ಟೆಂಬರ್ 24ರಂದು ಜರುಗಿತು.

ಅಧ್ಯಕ್ಷತೆ ವಹಿಸಿದ ಬಾರ್ಕೂರು ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿ ರಾಷ್ಟ್ರಪ್ರಶಸ್ತಿ ವಿಜೇತ ಶಿಕ್ಷಕ ಅಶೋಕ್ ಕುಮಾರ್ ಶೆಟ್ಟಿ ಮಾತನಾಡಿ ವಿದ್ಯಾರ್ಥಿಗಳು ಹೆತ್ತವರ ಮತ್ತು ಗುರುಗಳ ಮುಖದಲ್ಲಿ ಮಂದಹಾಸ ಮೂಡುವಂತೆ ಕೆಲಸ ಮಾಡಬೇಕೆಂದು ಹೇಳಿದರು. 

ಕಾರ್ಯಕ್ರಮದಲ್ಲಿ ಯು.ಎಸ್. ನಾಯಕ್ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು ಹಾಗೂ ಶ್ರೀ ಕೃಷ್ಣ ಪ್ಯಾಕೇಜಿಂಗ್ ಇಂಡಸ್ಟ್ರಿ ಹೇರಾಡಿ ಇದರ ಪಾಲುದಾರರಾದ ರಮೇಶ್ ಪೂಜಾರಿ ಇವರಿಂದ 2025-26 ಸಾಲಿನಲ್ಲಿ ಸಂಸ್ಥೆಯಲ್ಲಿ ತರಗತಿವಾರು ಪ್ರಥಮ ಹಾಗೂ ದ್ವಿತೀಯ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಹಾಗೂ ಸ್ಮರಣಕೆ ನೀಡಿ ಗೌರವಿಸಲಾಯಿತು. ದಿವಂಗತ ಬಿ. ಸೀತಾರಾಮ್ ಶೆಟ್ಟಿ ಫ್ಯಾಮಿಲಿ ಟ್ರಸ್ಟ್ ನ ವತಿಯಿಂದ ಇಬ್ಬರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಯಿತು.

ಮುಖ್ಯ ಅತಿಥಿಗಳಾಗಿ ಉಡುಪಿಯ ಯು.ಎಸ್.ನಾಯಕ್ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ನ ಟ್ರಸ್ಟಿ, ಯು. ಸುರೇಶ ನಾಯಕ್, ಜಾನೆಟ್ ಲೂಯಿಸ್, ಸಂಸ್ಥೆಯ ಸಂಚಾಲಕರಾದ ರಾಮಚಂದ್ರ ಕಾಮತ್, ನಿಕಟಪೂರ್ವ ಪ್ರಾಚಾರ್ಯರಾದ ವೆಂಕಟೇಶ ಕ್ರಮಧಾರಿ, ದಿವಂಗತ ಬಿ.ಸೀತಾರಾಮ ಶೆಟ್ಟಿ ಫ್ಯಾಮಿಲಿ ಟ್ರಸ್ಟ್ ನ ಜೈ ಕಿಶನ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು

ಪ್ರಾಂಶುಪಾಲರಾದ ಭಾಸ್ಕರ ಉಪಾಧ್ಯ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರಾಧ್ಯಾಪಕಿ ಶ್ರೀಮತಿ ಅಶ್ವಿನಿ ಆಚಾರ್ಯ ಪ್ರಾರ್ಥಿಸಿ, ಪ್ರಾಧ್ಯಾಪಕ ರಾದ ಮಂಜುನಾಥ್ ನಾಯ್ಕ್ ಕೆ. ಎಂ. ಕಾರ್ಯಕ್ರಮ ನಿರೂಪಿಸಿದರು ಹಾಗೂ ಪ್ರಾಧ್ಯಾಪಕರಾದ ಬಿ. ನಾಗರಾಜ್ ದೇವಾಡಿಗ ವಂದಿಸಿದರು.

Related Articles

Back to top button
error: Content is protected !!