ಬಾರ್ಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ: 236ನೇ ಸತ್ಯನಾರಾಯಣ ಪೂಜೆ, ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Views: 198
ಕನ್ನಡ ಕರಾವಳಿ ಸುದ್ದಿ: ಕರಾವಳಿ ಪದ್ಮಶಾಲಿಗರ ಮೂಲ ಕ್ಷೇತ್ರ ಬಾರ್ಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಕ್ಟೋಬರ್ 5ರಂದು ಸತ್ಯನಾರಾಯಣ ಪೂಜೆ ಮತ್ತು ದೇವಸ್ಥಾನದ ಕೂಡು ಕಟ್ಟಿಗೆ ಸೇರಿದ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು.
ಬೆಳಿಗ್ಗೆ ದೇವಸ್ಥಾನದಲ್ಲಿ ಬ್ರಹ್ಮಾವರ ಶ್ರೀಮತಿ ಲೀಲಾವತಿ ಮತ್ತು ಭುಜಂಗ ಶೆಟ್ಟಿಗಾರ್ ಮತ್ತು ಮಕ್ಕಳಿಂದ ಸತ್ಯನಾರಾಯಣ ಪೂಜೆ ನಡೆಯಿತು.
ಅಪರಾಹ್ನ ನಡೆದ ಮಾಸಿಕ ಸಭೆಯಲ್ಲಿ ದೇವಳದ ಆಡಳಿತ ಮೊಕ್ತೇಸರರಾದ ಬಾರ್ಕೂರು ರಂಗನಕೇರಿ ಶ್ರೀನಿವಾಸ ಶೆಟ್ಟಿಗಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇಗುಲದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ವಿದ್ಯಾರ್ಥಿಗಳಿಗೆ ಸಮಗ್ರ ಜ್ಞಾನವನ್ನು ಅಭಿವ್ಯಕ್ತಪಡಿಸುವ ಉತ್ತಮ ವೇದಿಕೆ ಇದಾಗಿದೆ ಎಂದರು.
ಈ ಸಂದರ್ಭದಲ್ಲಿ ವಿವಿದ ಸ್ಪರ್ಧೆಯಲ್ಲಿ ವಿಜೇತರಾದ ನಿರೀಕ್ಷಾ ಸಾಸ್ತಾನ, ಶಿಪಾಲಿ ಎಸ್ ಬಾರ್ಕೂರ್, ಶ್ರೀ ಸ್ತುತಿ ಬಾರ್ಕೂರು, ಆಶ್ಲೇಷ, ಆರಾಧ್ಯ, ಅಭಿನವ್, ಐಶ್ವರ್ಯ, ವರ್ಷಿಣಿ, ದರ್ಶಿತ್, ರಾನ್ವಿ, ರಮ್ಯ, ಮನಿಷ್, ರತ್ವಿಕ್, ಇವರಿಗೆ ಬಹುಮಾನ ವಿತರಿಸಲಾಯಿತು.
ವೇದಿಕೆಯಲ್ಲಿ ಅಭಿವೃದ್ಧಿಯ ಸಮಿತಿಯ ಅಧ್ಯಕ್ಷ ಡಾ. ಜಯರಾಮ್ ಶೆಟ್ಟಿಗಾರ್, ವೀರೇಶ್ವರ ಸಮಿತಿಯ ಅಧ್ಯಕ್ಷ ಪುರುಷೋತ್ತಮ ಮಣಿಪಾಲ್, ಸಂಘಟನಾ ಸಮಿತಿಯ ಅಧ್ಯಕ್ಷ ಭಾಸ್ಕರ್ ಶೆಟ್ಟಿಗಾರ ಸಂತೆಕಟ್ಟೆ, ಶ್ರೀ ದುರ್ಗಾಪರಮೇಶ್ವರಿ ಮಹಿಳಾ ವೇದಿಕೆಯ ಅಧ್ಯಕ್ಷೆ ಚಂದ್ರಾವತಿ ಸದಾಶಿವ ಶೆಟ್ಟಿಗಾರ್ ಬ್ರಹ್ಮಾವರ, ಯುವ ವೇದಿಕೆ ಅಧ್ಯಕ್ಷ ಸಂಜೀವ ಶೆಟ್ಟಿಗಾರ ಸಾಸ್ತಾನ, ನಾರಾಯಣ ಶೆಟ್ಟಿಗಾರ ಸುರತ್ಕಲ್, ಕಾರ್ಯದರ್ಶಿ ಜನಾರ್ಧನ್ ಶೆಟ್ಟಿಗಾರ್, ಶ್ರೀ ಬ್ರಹ್ಮಲಿಂಗ ವೀರಭದ್ರ ಪದ್ಮಶಾಲಿ/ ಶೆಟ್ಟಿಗಾರ ಸಮಾಜ ಸೇವಾ ಟ್ರಸ್ಟ್ ಅಧ್ಯಕ್ಷ ಸುಧಾಕರ್ ವಕ್ವಾಡಿ, ಸಹ ಮೊಕ್ತೇಸರರು, ಗುರಿಕಾರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕಾರ್ಯದರ್ಶಿ ಜನಾರ್ದನ್ ಶೆಟ್ಟಿಗಾರ ಸ್ವಾಗತಿಸಿ,ವರದಿ ವಾಚಿಸಿದರು. ಚಂದ್ರಶೇಖರ ಹೊಸಾಳ ಲೆಕ್ಕಪತ್ರ ವರದಿ ಮಂಡಿಸಿದರು. ಸಂಘಟನಾ ಸಮಿತಿಯ ಅಧ್ಯಕ್ಷ ಭಾಸ್ಕರ್ ಶೆಟ್ಟಿಗಾರ್ ವಂದಿಸಿದರು.