ಸಾಂಸ್ಕೃತಿಕ

ಬಾಲಿವುಡ್ ನಟಿ ಪರಿಣಿತಿ ಚೋಪ್ರಾ- ರಾಘವ್ ಚಡ್ಡಾ ಮದುವೆ ಡೇಟ್ ಫಿಕ್ಸ್

Views: 0

ಬಾಲಿವುಡ್ ನಟಿ ಪರಿಣಿತಿ ಚೋಪ್ರಾ- ರಾಘವ್ ಚಡ್ಡಾ ಮದುವೆ ಡೇಟ್ ಫಿಕ್ಸ್ ಆಗಿದೆ. ಇದೇ ಸೆಪ್ಟೆಂಬರ್ 24ರಂದು ಹೊಸ ಬಾಳಿಗೆ ಕಾಲಿಡಲು ರೆಡಿಯಾಗಿದ್ದಾರೆ. ರಾಜಕಾರಣಿ ಜೊತೆ ಸ್ಟಾರ್ ನಟಿಯ ಮದುವೆಗೆ ಭರ್ಜರಿ ತಯಾರಿ ನಡೆಯುತ್ತಿದೆ.

ಇದೇ ಸೆ.23 ಮತ್ತು 24ರಂದು ರಾಜಸ್ಥಾನದ ಲೀಲಾ ಪ್ಯಾಲೇಸ್ ಮತ್ತು ದಿ ಒಬೆರಾಯ್ ಉದಯವಿಲಾಸದಲ್ಲಿ ಅದ್ದೂರಿಯಾಗಿ ಮದುವೆ ಕಾರ್ಯಕ್ರಮ ಜರುಗಲಿದೆ. ಈ ಮದುವೆಗೆ 200ಕ್ಕೂ ಹೆಚ್ಚು ಅತಿಥಿಗಳು ಮತ್ತು 50ಕ್ಕೂ ಹೆಚ್ಚು ವಿವಿಐಪಿಗಳಿಗೆ ಅವಕಾಶ ಕಲ್ಪಿಸಲಾಗುತ್ತಿದೆ.

ಹಳದಿ ಶಾಸ್ತ್ರ ಮೆಹೆಂದಿ ಸಂಗೀತ ಕಾರ್ಯಕ್ರಮವು ಸೆ.23ರಂದು ನಡೆಯಲಿದ್ದು, ಸೆ.24ರಂದು ಅದ್ಧೂರಿಯಾಗಿ ವಿವಾಹ ನಡೆಯಲಿದೆ. ಮದುವೆಯ ಬಳಿಕ ಹರಿಯಾಣದಲ್ಲಿ ಈ ಜೋಡಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ.

Related Articles

Back to top button
error: Content is protected !!