ಸಾಂಸ್ಕೃತಿಕ
ಬಾಲಿವುಡ್ ನಟ ನಾನಾ ಪಾಟೇಕರ್ ಹೃದಯಾಘಾತದಿಂದ ನಿಧನ
Views: 34
ಕನ್ನಡ ಕರಾವಳಿ ಸುದ್ದಿ: ಬಾಲಿವುಡ್ ಹಿರಿಯ ನಟ ಮತ್ತು ಚಲನಚಿತ್ರ ನಿರ್ಮಾಪಕ ನಾನಾ ಪಾಟೇಕರ್ ಅವರು ಗುರುವಾರ ಅಗಸ್ಟ್. 08 ರಂದು ಗೋವಾದಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಅವರಿಗೆ 75 ವರ್ಷ ವಯಸ್ಸಾಗಿತ್ತು.
ಗೋವಾದ ಡೋನಾ ಪೌಲಾದಲ್ಲಿರುವ ಅವರ ನಿವಾಸದಲ್ಲಿ ಬೆಳಗ್ಗೆ 5.20ರ ಸುಮಾರಿಗೆ ನಾನಾ ಪಾಟೇಕರ್ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತಕ್ಷಣ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ವೈದ್ಯರು ಸುಮಾರು 45 ನಿಮಿಷಗಳ ಕಾಲ ಅವರನ್ನು ಬದುಕುಳಿಸಲು ಸಿಪಿಆರ್ ಸೇರಿ ಅನೇಕ ಚಿಕಿತ್ಸೆ ನೀಡಿದ್ದಾರೆ. ಆದರೆ ಯಾವುದೇ ಚಿಕಿತ್ಸೆ ಫಲಿಸದೇ ಅವರು ನಿಧನರಾಗಿದ್ದಾರೆ.






