ಸಾಂಸ್ಕೃತಿಕ
ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಸ್ಥಿತಿ ಗಂಭೀರ: ವೆಂಟಿಲೇಟರ್ ನಲ್ಲಿ ಚಿಕಿತ್ಸೆ
ಭಾರತೀಯ ಚಿತ್ರರಂಗದ ಹೆಸರಾಂತ ನಟ ಧರ್ಮೇಂದ್ರ ಅವರ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Views: 28
ಕನ್ನಡ ಕರಾವಳಿ ಸುದ್ದಿ: ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಅವರ ಸ್ಥಿತಿ ಗಂಭಿರವಾಗಿದ್ದು, ವೆಂಟಿಲೇಟರ್ನಲ್ಲಿದ್ದಾರೆ. ಈ ತಿಂಗಳಾರಂಭದಲ್ಲಿ ರುಟಿನ್ ಮೆಡಿಕಲ್ ಚೆಕ್ – ಅಪ್ಗಾಗಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚೇತರಿಸಿಕೊಂಡಿದ್ದ ಅವರು ಇಂದು ಮತ್ತೆ ವೆಂಟಿಲೇಟರ್ ಸಹಾಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಭಿಮಾನಿಗಳು ಆತಂಕಗೊಂಡಿದ್ದಾರೆ.
89ರ ಹರೆಯದ ನಟ ಇದೇ ಸಾಲಿನ ಏಪ್ರಿಲ್‌ನಲ್ಲಿ ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ನಂತರ ರುಟಿನ್ ಮೆಡಿಕಲ್ ಚೆಕ್ – ಅಪ್ಸ್ ನಡೆಯುತ್ತಿದ್ದವು. ಅಭಿಮಾನಿಗಳು ನಟನ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತಿದ್ದರು. ಆದರೆ, ಇಂದು ಸ್ಥಿತಿ ಗಂಭಿರವಾಗಿದೆ ಎಂಬುದನ್ನು ಅರಿತ ಅಭಿಮಾನಿಗಳು ಕಳವಳ ವ್ಯಕ್ತಪಡಿಸುತ್ತಿದ್ದಾರೆ. ನಟನ ಶೀಘ್ರ ಚೇತರಿಕೆಗೆ ಪ್ರಾರ್ಥಿಸುತ್ತಿದ್ದಾರೆ. ಡಿಸೆಂಬರ್ನಲ್ಲಿ ಅವರ 90ನೇ ಹುಟ್ಟುಹಬ್ಬ ಆಚರಿಸಲು ಕೋಟ್ಯಂತರ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ.






