ಇತರೆ

ಬಾವಿ ಕಟ್ಟೆಯಲ್ಲಿ ಕುಳಿತು ಸ್ನೇಹಿತರೊಂದಿಗೆ ಮಾತನಾಡುತ್ತಿರುವ ವೇಳೆ ಆಯತಪ್ಪಿ ಬಾವಿಗೆ ಬಿದ್ದು ಸಾವು 

Views: 77

ಮಂಗಳೂರು: ಸಮುದ್ರ ತೀರದ ಬಳಿ ಇರುವ ಪಾಳು ಬಿದ್ದ ಬಾವಿಯ ಕಟ್ಟೆಯಲ್ಲಿ ಕುಳಿತು ಸ್ನೇಹಿತರೊಂದಿಗೆ ಮಾತನಾಡುತ್ತಿರುವ ವೇಳೆ ಆಯತಪ್ಪಿ ಬಾವಿಗೆ ಬಿದ್ದು ಸ್ಥಳೀಯ ಮೀನುಗಾರರೊಬ್ಬರು ಸಾವನಪ್ಪಿದ ಘಟನೆ ಸೋಮೇಶ್ವರ ಉಚ್ಚಿಲದಲ್ಲಿ ನಡೆದಿದೆ.

ಮೃತರನ್ನು ಉಚ್ಚಿಲ ವಾಝ್ಕೊ ರೆಸಾರ್ಟ್ ಬಳಿಯ ನಿವಾಸಿ ಶಶೀಂದ್ರ ಎಂ. ಉಚ್ಚಿಲ್ (74) ಎಂದು ಗುರುತಿಸಲಾಗಿದೆ.

ಶಶೀಂದ್ರ ಅವರು ಮೀನುಗಾರಿಕೆ ವೃತ್ತಿ ನಡೆಸುತ್ತಿದ್ದು, ಸಂಜೆ ಸ್ನೇಹಿತನೊಂದಿಗೆ ವಾಝ್ಕೋ ರೆಸಾರ್ಟ್ ಮುಂಭಾಗದ ಪಾಳು ಬಿದ್ದ ಬಾವಿಯ ಕಟ್ಟೆಯಲ್ಲಿ ಕುಳಿತು ಮಾತನಾಡುತ್ತಿದ್ದ ವೇಳೆ ಶಶೀಂದ್ರ ಅವರು ಆಯತಪ್ಪಿ ಬಾವಿಯೊಳಗೆ ಬಿದ್ದಿದ್ದಾರೆ. ತಲೆಕೆಳಗಾಗಿ ಬಾವಿಗೆ ಬಿದ್ದಿದ್ದು, ಬಾವಿಯೊಳಗೆ ಕೇವಲ 3ಅಡಿ ನೀರಿದ್ದ ಪರಿಣಾಮ ತಲೆಗೆ ಗಂಭೀರ ಏಟು ತಗುಲಿ ಸಾವನ್ನಪ್ಪಿದ್ದಾರೆ.. ಉಳ್ಳಾಲ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

Related Articles

Back to top button
error: Content is protected !!