ಸಾಂಸ್ಕೃತಿಕ

‘ಬಿಗ್ ಬಾಸ್ ಕನ್ನಡ ಸೀಸನ್ -12’ ಬಿಗ್ ಶಾಕ್..! ಎರಡೇ ವಾರದಲ್ಲಿ ಬೀಗ ಮುದ್ರೆ.. ಹೊರಗೆ ಬಂದ ಎಲ್ಲ ಕಂಟೆಸ್ಟೆಂಟ್ಸ್

Views: 111

ಕನ್ನಡ ಕರಾವಳಿ ಸುದ್ದಿ:ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್- 12 ಶೋ ನಡೆಸುತ್ತಿದ್ದ ಜಾಲಿವುಡ್ ಸ್ಟುಡಿಯೋ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆದಿರಲಿಲ್ಲ. ಈ ಸಂಬಂಧ ಜಾಲಿವುಡ್ ಸ್ಟುಡಿಯೋಗೆ ನೋಟಿಸ್ ನೀಡಲಾಗಿತ್ತು. ಇದೀಗ ಸ್ಟುಡಿಯೋಗೆ ರಾಮನಗರದ ತಹಶೀಲ್ದಾರ್ ತೇಜಸ್ವಿನಿ ಅವರು ಬೀಗ ಜಡಿದಿದ್ದಾರೆ. ಬಿಗ್ ಬಾಸ್- 12ರ ಸ್ಪರ್ಧಿಗಳನ್ನು ಹೊರಗೆ ಕರೆದುಕೊಂಡು ಬರಲಾಗಿದೆ.

ಬಿಗ್ ಬಾಸ್ ಸೀಸನ್- 12 ಕಾರ್ಯಕ್ರಮ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಗೆ ಬೀಗ ಹಾಕುತ್ತಿದ್ದಂತೆ ಸ್ಪರ್ಧಿಗಳಾದ ಕಾವ್ಯ ಶೈವ, ಗಿಲ್ಲಿ ನಟ, ಡಾಗ್ ಸತೀಶ್, ಚಂದ್ರಪ್ರಭ, ಅಭಿಷೇಕ್, ಮುದ್ದು ಲಕ್ಷ್ಮೀ ಖ್ಯಾತಿಯ ಅಶ್ವಿನಿ, ಮಂಜು ಭಾಷಿಣಿ, ರಾಶಿಕಾ, ಕಾಕ್ರೋಚ್ ಸುಧಿ, ಮಲ್ಲಮ್ಮ, ನಿರೂಪಕಿ ಜಾಹ್ನವಿ, ಧನುಷ್ ಗೌಡ, ಮುದ್ದು ಲಕ್ಷ್ಮೀ ಖ್ಯಾತಿಯ ನಟ ಧ್ರುವಂತ್, ನಟಿ ಅಶ್ವಿನಿ ಗೌಡ ಸೇರಿ ಎಲ್ಲರೂ ಒಬ್ಬೊಬ್ಬರೇ ಮನೆಯಿಂದ ಹೊರ ಬಂದಿದ್ದಾರೆ.

ಜಾಲಿವುಡ್ ಸ್ಟುಡಿಯೋಸ್ ಮತ್ತು ಎಂಟರ್ಟೇನ್ಮೆಂಟ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಮುಖ್ಯ ಬಾಗಿಲಿಗೆ ಬೆಂಗಳೂರು ದಕ್ಷಿಣ ಜಿಲ್ಲಾಡಳಿತದವರು ಬೀಗ ಹಾಕಿದ್ದಾರೆ. ಬಿಡದಿಯ ಕೈಗಾರಿಕಾ ಪ್ರದೇಶದಲ್ಲಿ ಜಾಲಿವುಡ್ ಸ್ಟುಡಿಯೋಸ್ ಇದೆ. ಆದರೆ ಪರಿಸರ ನಿಯಮಗಳನ್ನು ಉಲ್ಲಂಘನೆ ಮಾಡಿರುವ ಆರೋಪದ ಅಡಿಯಲ್ಲಿ ರಾಮನಗರದ ತಹಶೀಲ್ದಾರ್ ಹಾಗೂ ಪೊಲೀಸರ ಸಮ್ಮುಖದಲ್ಲಿ ಬೀಗ ಜಡಿಯಲಾಗಿದೆ.

ಜಾಲಿವುಡ್ ನವರು ಬಿಗ್ಬಾಸ್ ಹಾಗೂ ಎಂಡೋಮಾಲ್, ಕಲರ್ಸ್ ಅವರ ಜೊತೆ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ ಎನ್ನಲಾಗಿದೆ. ದೊಡ್ಡ ಬಜೆಟ್ ನಲ್ಲಿ ಮಾಡುವ ಕಾರ್ಯಕ್ರಮದ ಬಗ್ಗೆ ಕಲರ್ಸ್ ಅವರು ಎಚ್ಚರಿಕೆ ವಹಿಸಬೇಕಿತ್ತು.

Related Articles

Back to top button