ರಾಜಕೀಯ

ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಚಾಟನೆ

Views: 138

ಕನ್ನಡ ಕರಾವಳಿ ಸುದ್ದಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟಿಸಲಾಗಿದೆ. ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿಯಿಂದ ಆದೇಶ ಹೊರಡಿಸಿದೆ.

ಶಿಸ್ತು ಸಮಿತಿ ನೀಡಿದ್ದ ಶೋಕಾಸ್‌ ನೋಟಿಸ್‌ಗೆ ಯಾವುದೇ ಉತ್ತರ ನೀಡದ ಕಾರಣ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ.

1994ರಲ್ಲೇ ರಾಜಕೀಯ ಬದುಕನ್ನು ಆರಂಭಿಸಿದ ಯತ್ನಾಳ್‌ ಪಕ್ಷದಿಂದ ಉಚ್ಚಾಟಿತರಾಗಿದ್ದು ಇದ್ದು ಮೊದಲ ಸಲವೇನಲ್ಲ. ಈ ಹಿಂದೆ 2015ರಲ್ಲಿ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು. 2015ರಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ವಿಜಯಪುರ ಸ್ಥಳೀಯ ಪ್ರಾಧಿಕಾರಗಳ ಅವಳಿ ಕ್ಷೇತ್ರಗಳಿಗೆ ಯತ್ನಾಳ್‌ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಇದು ಬಿಜೆಪಿ ನಾಯಕರ ಅಸಮಾಧಾನಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನುಬಿಜೆಪಿಯಿಂದ ಹೊರಹಾಕಲಾಗಿತ್ತು. 2018ರಲ್ಲಿ ಅವರು ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿದ್ದರು. 2018ರಲ್ಲಿ ವಿಜಯಪುರ ಜಿಲ್ಲೆಯಿಂದ ಬಿಜೆಪಿಯಿಂದ ಸ್ಪರ್ಧಿಸಿದ್ದ ಅವರು ಇದೀಗ ಸತತ 2ನೇ ಬಾರಿ ಶಾಸಕರಾಗಿದ್ದಾರೆ.

ಯತ್ನಾಳ್‌ ಅವರು 1994ರಲ್ಲಿ ರಾಜಕೀಯ ಬದುಕನ್ನು ಆರಂಭಿಸಿದರು. ಬಿಜೆಪಿ ಅಭ್ಯರ್ಥಿಯಾಗಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಈ ಚುನಾವಣೆಯಲ್ಲಿ ಬಿಜಾಪುರ ಕ್ಷೇತ್ರದಿಂದ ಆಯ್ಕೆಯಾಗಿದ್ದರು. 1999ರ ಲೋಕಸಭಾ ಚುನಾವಣೆಯಲ್ಲಿ ಬಿಜಾಪುರ ಕ್ಷೇತ್ರದಿಂದ ಸ್ಪರ್ಧಿಸಿ ಅಲ್ಲಿಯೂ ಜಯ ಗಳಿಸಿದ್ದರು. ಅವರು 2004ರಲ್ಲಿ ಲೋಕಸಭೆಗೆ ಮರು ಆಯ್ಕೆಯಾಗಿದ್ದರು. ಅವರು 2003ರ ಸೆಪ್ಟೆಂಬರ್‌ 8ರಿಂದ 2004ರ ಮೇ 16ರವರೆಗೆ ಕೇಂದ್ರದಲ್ಲಿ ರೈಲ್ವೆ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು.

 

Related Articles

Back to top button