ರಾಜಕೀಯ

ಬಿಜೆಪಿ ಅಧ್ಯಕ್ಷ ಸ್ಥಾನ: ಮತ್ತೆ ವಿಜಯೇಂದ್ರ ಹೆಸರು  ಮುನ್ನೆಲೆಗೆ

Views: 0

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಹಿಂದೇಟು ಹಾಕುತ್ತಿರುವುದರಿಂದ ಉಪಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಅವರ ಹೆಸರು ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.

ಹೈಕಮಾಂಡ್ ನವರು  ತಾವು ತಿಳಿಸಿದ ವ್ಯಕ್ತಿಗೆ ರಾಜ್ಯಾಧ್ಯಕ್ಷ ಪ್ರತಿ ಪಕ್ಷದ ನಾಯಕರ ಹೆಸರನ್ನು ಪ್ರಸ್ತಾಪಿಸಿದ್ದಾರೆ.ಅದಕ್ಕೆ ಯಡಿಯೂರಪ್ಪ ಒಪ್ಪದೆ ಇರುವುದರಿಂದ ತಾವು ತಿಳಿಸಿದ ವ್ಯಕ್ತಿಗಳಿಗೆ ಸ್ಥಾನ ನೀಡಬೇಕು ಎಂದು ಪಟ್ಟು ಹಿಡಿದಿದ್ದರಿಂದ ಇಲ್ಲಿಯವರೆಗೂ ಆ ಸ್ಥಾನದ ಬಗ್ಗೆ ನೇಮಕವಾಗದೆ ನೆನೆಗುದಿಗೆ ಬಿದ್ದಿತ್ತು. ರಾಜ್ಯದ ಯಾವ ನಾಯಕರೂ ಯಡ್ಡಿ ತಿಳಿಸಿದ ನಾಯಕರ ಬಗ್ಗೆ ಬೆಂಬಲ ನೀಡದೇ ಇರುವುದರಿಂದ  ಹೈಕಮಾಂಡ್ ಮೌನವಹಿಸಿತ್ತು.

ತಾವು ರಾಜ್ಯ ರಾಜಕಾರಣಕ್ಕೆ ಬರುವುದಿಲ್ಲ ನನಗೆ ಕೊಟ್ಟ ಸಚಿವ ಸ್ಥಾನದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಶೋಭಾ ಇತ್ತೀಚೆಗೆ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ವಿಜಯೇಂದ್ರ ಅವರನ್ನು ನೇಮಿಸುವ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಗೃಹ ಸಚಿವ ಅಮಿತ್‌ ಶಾ ಅವರು ಒಲವು ಹೊಂದಿದ್ದಾರೆ. ಆದರೆ ಇದಕ್ಕೆ ಪ್ರಧಾನಿ ಮೋದಿ ಅವರ ಒಪ್ಪಿಗೆಯ ಅಗತ್ಯವಿದೆ ಎಂದು ಮೂಲಗಳು ತಿಳಿಸಿವೆ.

ಜನಪ್ರಿಯತೆ, ಹಣ ಖರ್ಚು ಮಾಡುವ ಹಾಗೂ ಪಕ್ಷವನ್ನು ಸಂಘಟಿಸುವ ಸಾಮರ್ಥ್ಯ ವಿಜಯೇಂದ್ರ ಅವರಿಗಿದೆ. ರಾಜ್ಯದ ಉದ್ದಗಲಕ್ಕೂ ಓಡಾಡಿ ಪಕ್ಷವನ್ನು ಕಟ್ಟಬಲ್ಲರು. ಯಡಿಯೂರಪ್ಪ ಅವರೂ ಪೂರ್ಣ ಮನಸ್ಸಿನಿಂದ ಕೆಲಸ ಮಾಡಬಲ್ಲರು ಎಂಬ ಚರ್ಚೆಯೂ ಪಕ್ಷದಲ್ಲಿ ನಡೆದಿದೆ.

ಶಾಸಕ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ತೆರೆದ ಹೃದಯದ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಕಾರಣ ಅವರಿಗೆ ವಿಶ್ರಾಂತಿಯ ಅಗತ್ಯ ಇದೆ. ಹೀಗಾಗಿ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಬಸನಗೌಡ ಪಾಟೀಲ ಯತ್ನಾಳ ಮತ್ತು ವಿ.ಸುನಿಲ್ ಕುಮಾರ್‌ ಹೆಸರುಗಳು ಮುನ್ನೆಲೆಗೆ ಬಂದಿದೆ. ಅಧ್ಯಕ್ಷ ಸ್ಥಾನಕ್ಕೆ ಲಿಂಗಾಯತರ ನೇಮಕಗೊಂಡರೆ ವಿರೋಧ ಪಕ್ಷದ ಸ್ಥಾನ ಹಿಂದುಳಿದ ವರ್ಗಕ್ಕೆ ಹೋಗುತ್ತದೆ. ಅಧ್ಯಕ್ಷ ಸ್ಥಾನಕ್ಕೆ ಲಿಂಗಾಯಿತರೇತರು ನೇಮಕಗೊಂಡರೆ ಆಗ ಯತ್ನಾಳ ಅವರಿಗೆ ಅವಕಾಶ ಸಿಗಬಹುದು ಎಂಬ ಚರ್ಚೆ ಪಕ್ಷದ ವಲಯದಲ್ಲಿ ನಡೆದಿದೆ

ಅಧ್ಯಕ್ಷ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಲಾಗುತ್ತದೆ? ಶೋಭಾ ಅವರ ಹೆಸರು ಕೇಳಿ ಬರುತ್ತಿದೆಯಲ್ಲ’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದಾಗ, ‘ಯಾರನ್ನಾದರೂ ಮಾಡಲಿ, ಯಾರಾದರೂ ಒಬ್ಬರು ಸದ್ಯವೇ ನೇಮಕಗೊಳ್ಳಲಿದ್ದಾರೆ’ ಎಂದು ಯಡಿಯೂರಪ್ಪ ಹೇಳಿದರು.ಸದ್ಯ  ಯಡಿಯೂರಪ್ಪ ತಿಳಿಸಿದ ವ್ಯಕ್ತಿಯನ್ನು ಆಯ್ಕೆ ಮಾಡಲು ಹೈಕಮಾಂಡ್ ಮಣೆ ಹಾಕಲಿದ್ದಾರೆ ಎಂದು ತಿಳಿದು ಬಂದಿದೆ.

Related Articles

Back to top button
error: Content is protected !!