ರಾಜಕೀಯ

ಬಿಜೆಪಿ ಒಬಿಸಿ ಮೋರ್ಚಾದ ‘ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ’ಯಾಗಿ ಪ್ರಮೋದ್ ಮಧ್ವರಾಜ್

Views: 25

ಕನ್ನಡ ಕರಾವಳಿ ಸುದ್ದಿ: ಮಾಜಿ ಸಚಿವರು ಹಾಗೂ ಉಡುಪಿಯ ಹಿರಿಯ ಬಿಜೆಪಿ ನಾಯಕರಾದ ಪ್ರಮೋದ್ ಮಧ್ವರಾಜ್ ಅವರನ್ನು ಬಿಜೆಪಿ ಒಬಿಸಿ ಮೋರ್ಚಾದ ‘ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ’ಯಾಗಿ ಆಯ್ಕೆ ಮಾಡಲಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನಬಿನ್ ಅವರು ನವೆಂಬರ್ 21, 2026 ರಂದು ಪಕ್ಷದ ಒಬಿಸಿ ಮೋರ್ಚಾದ ನೂತನ ಪದಾಧಿಕಾರಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಅದರಲ್ಲಿ ಪ್ರಮೋದ್ ಮಧ್ವರಾಜ್ ಅವರಿಗೆ ಈ ರಾಷ್ಟ್ರೀಯ ಮಟ್ಟದ ಜವಾಬ್ದಾರಿಯನ್ನು ನೀಡಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಪ್ರಮೋದ್ ಮಧ್ವರಾಜ್ ಅವರು, ದೇವರು ಕೊಟ್ಟ ಶಕ್ತಿಯಲ್ಲಿ ಪಕ್ಷ ವಹಿಸಿದ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸುವುದಾಗಿ ಭರವಸೆ ನೀಡಿದ್ದಾರೆ.

ನೂತನ ಜವಾಬ್ದಾರಿ ವಹಿಸಿಕೊಂಡಿರುವ ಅವರಿಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ.

2013 ರಿಂದ 2018 ರವರೆಗೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಮತ್ತು ರಾಜ್ಯ ಸರ್ಕಾರದಲ್ಲಿ ಮೀನುಗಾರಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾಗಿ ಸೇವೆ ಸಲ್ಲಿಸಿದ್ದ ಇವರು, 2022 ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು.

Related Articles

Back to top button
error: Content is protected !!