ಬಿಜೆಪಿ ಜಾರಿಗೆ ತಂದ ಮೂರು ಕಾಯ್ದೆಗಳಿಗೆ ಬ್ರೇಕ್

Views: 0
ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ಮತಾಂತರ ನಿಷೇಧ ಕಾಯ್ದೆ, ಎಪಿಎಂಸಿ ಕಾಯ್ದೆ, ಪಠ್ಯಪುಸ್ತಕ ಪರಿಷ್ಕರಣೆಯ ಕೆಲವು ಪಠ್ಯಗಳಿಗೆ ರದ್ದುಗೊಳಿಸುವ ಮಹತ್ವದ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿದೆ.
ಅಧಿಕಾರಕ್ಕೆ ಬಂದರೆ ಬಿಜೆಪಿ ಸರಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ಕೆಲವು ಕಾಯ್ದೆಗಳು, ತೀರ್ಮಾನಗಳನ್ನು ರದ್ದುಗೊಳಿಸುವುದಾಗಿ ಚುನಾವಣಾ ಪೂರ್ವದಲ್ಲಿ ಘೋಷಿಸಿದ್ದ ಕಾಂಗ್ರೆಸ್, ಇದೀಗ ತನ್ನ ಎರಡನೇ ಸಚಿವ ಸಂಪುಟ ಸಭೆಯಲ್ಲಿ ಹಿಂದಿನ ಸರ್ಕಾರದ ಮೂರು ತೀರ್ಮಾನಗಳಿಗೆ ರದ್ದುಗೊಳಿಸಲು ನಿರ್ಧರಿಸಿದೆ.
ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣ ಕಾಯ್ದೆಯು ಹಿಂದಿನ ತಿದ್ದುಪಡಿ ವಾಪಸ್ ಪಡೆದು ಜುಲಾಯಿ ಒಂದರಿಂದ ಆರಂಭವಾಗುವ ಅಧಿವೇಶನದಲ್ಲಿ ತಿದ್ದುಪಡಿ ವಿಧೇಯಕ ಮಂಡಿಸಲಾಗುವುದು.
ಎಪಿಎಂಸಿ ಕಾಯ್ದೆ ವಿಚಾರದಲ್ಲಿ ಕೇಂದ್ರ ಇಟ್ಟುಕೊಂಡ ಉದ್ದೇಶ ಸಾಬೀತಾಗಿಲ್ಲ, ಬೆಲೆ ಸಿಗಬೇಕೆಂದು ಬಯಸಿದ್ದರು ಬೆಲೆ ಸಿಗಲಿಲ್ಲ ಮಾರುಕಟ್ಟೆಯಲ್ಲಿ ವ್ಯಾಪಕ ಗಣನೀಯವಾಗಿ ಕಡಿಮೆಯಾಗಿದ್ದರಿಂದ ಸಂಪುಟ ಸಭೆಯಲ್ಲಿ ಈ ಕಾಯ್ದೆ ಹಿಂಪಡೆಯಲು ಒಪ್ಪಲಾಗಿದೆ ಎಂದು ಸಚಿವ ಶಿವಾನಂದ ಪಾಟೀಲ್ ಹೇಳಿದರು






