ರಾಜಕೀಯ

ಬಿಜೆಪಿ-ಜೆಡಿಎಸ್ ಗೆ ಬಿಗ್ ಶಾಕ್; ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದ ಯೋಗೇಶ್ವರ

Views: 224

ಬೆಂಗಳೂರು: ಬೆಳ್ಳಂಬೆಳಿಗ್ಗೆ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮಾಜಿ ಸಚಿವ, ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಕಾಂಗ್ರೆಸ್ಗೆ ಸೇರ್ಪಡೆ ಆಗಿದ್ದಾರೆ. ಆ ಮೂಲಕ ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯೋದು ಪಕ್ಕಾ ಆಗಿದೆ.

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಯಲ್ಲಿ ಸಿಪಿ ಯೋಗೇಶ್ವರ್ ಯಾವ ಪಕ್ಷದಿಂದ ಸ್ಪರ್ಧೆ ಮಾಡ್ತಾರೆ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಯಾರು ಅನ್ನೋ ಕುತೂಹಲಗಳಿಗೆ ತೆರೆ ಬಿದ್ದಿದೆ. ಇಂದು ಬೆಳಗ್ಗೆ ಸದಾಶಿವನಗರದಲ್ಲಿರುವ ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ಯೋಗೇಶ್ವರ್ ಆಗಮಿಸಿದರು. ಡಿಕೆಶಿ ನಿವಾಸದಲ್ಲಿ ಕಾಂಗ್ರೆಸ್ಗೆ ಸೇರುವ ಬಗ್ಗೆ ಮಾತುಕತೆ ನಡೆಸಿದರು.

ಬಳಿಕ ಡಿಕೆ ಶಿವಕುಮಾರ್ ಹಾಗೂ ಸಿಪಿ ಯೋಗೇಶ್ವರ್ ಒಂದೇ ಕಾರಿನಲ್ಲಿ ಸಿಎಂ ನಿವಾಸಕ್ಕೆ ತೆರಳಿದ್ದರು. ಸಿದ್ದರಾಮಯ್ಯ ನಿವಾಸದಲ್ಲಿ ಯೋಗೇಶ್ವರ್ ಅಧಿಕೃತವಾಗಿ ಕಾಂಗ್ರೆಸ್ಗೆ ಸೇರ್ಪಡೆ ಆಗಿದ್ದಾರೆ. ಸಿದ್ದರಾಮಯ್ಯರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡರು. ಈ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವ ಜಮೀರ್ ಅಹ್ಮದ್ ಹಾಗೂ ಡಿಕೆ ಸುರೇಶ್ ಸೇರಿ ಹಲವು ಕಾಂಗ್ರೆಸ್ ನಾಯಕರಿದ್ದರು.

ಸಿಪಿ ಯೋಗೇಶ್ವರ್ ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದರು. ಆದರೆ ಬಿಜೆಪಿ ಹೈಕಮಾಂಡ್ ಜೆಡಿಎಸ್ಗೆ ಟಿಕೆಟ್ ನೀಡಲು ತೀರ್ಮಾನಿಸಿತ್ತು. ಇದರಿಂದ ಬಂಡಾಯವೆದ್ದ ಸಿಪಿ ಯೋಗೇಶ್ವರ್, ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು. ಜೊತೆಗೆ ಚುನಾವಣೆಯಲ್ಲಿ ಪಕ್ಷೇತರ ಅಥವಾ ಕಾಂಗ್ರೆಸ್ನಿಂದ ಸ್ಪರ್ಧಿಸುವ ಎಚ್ಚರಿಕೆಯನ್ನು ನೀಡಿದ್ದರು. ಸಿಪಿ ಯೋಗೇಶ್ವರ್ ಬಂಡಾಯ ಏಳುತ್ತಿದ್ದಂತೆ ಎಚ್ಚೆತ್ತುಕೊಂಡಿದ್ದ ಕುಮಾರಸ್ವಾಮಿ, ಜೆಡಿಎಸ್ ಚಿಹ್ನೆ ಅಡಿಯಲ್ಲಿ ಸ್ಪರ್ಧಿಸುವಂತೆ ಆಫರ್ ನೀಡಿದ್ದರು. ಇದನ್ನು ಯೋಗೇಶ್ವರ್ ತಿರಸ್ಕರಿಸಿದ್ದರು. ಕೊನೆಗೆ ಕುಮಾರಸ್ವಾಮಿ, ಬಿಜೆಪಿಯಿಂದಲೇ ಯೋಗೇಶ್ವರ್ ಸ್ಪರ್ಧಿಸಲು ಒಪ್ಪಿಕೊಂಡಿದ್ದರು ಎಂದು ಹೇಳಲಾಗಿತ್ತು. ಆ ಮೂಲಕ ಸಿಪಿ ಯೋಗೇಶ್ವರ್ಗೆ ಮೂರು ಪಕ್ಷಗಳಿಂದ ಆಫರ್ ಪಡೆದುಕೊಂಡಿದ್ದರು. ಆದರೆ ನಿನ್ನೆಯವರೆಗೂ ಗುಟ್ಟು ಬಿಟ್ಟುಕೊಡದ ಯೋಗೇಶ್ವರ್ ಇಂದು ಬೆಳಿಗ್ಗೆ ಕಾಂಗ್ರೆಸ್ ಸೇರಿದ್ದಾರೆ.

Related Articles

Back to top button
error: Content is protected !!