ರಾಜಕೀಯ

ಬಿಜೆಪಿ ನನ್ನ ಯಾವ ಹುದ್ದೆಯಿಂದ ವಜಾ ಮಾಡಿದೆ ಎಂದು ಹೇಳಲಿ? ಮಾಜಿ ಶಾಸಕ ರಘುಪತಿ ಭಟ್ 

Views: 108

ಬಿಜೆಪಿ ನನ್ನ ಯಾವ ಹುದ್ದೆಯಿಂದ ವಜಾ ಮಾಡಿದೆ ಎಂದು ಹೇಳಲಿ ಎಂದು ಮಾಜಿ ಶಾಸಕ ರಘುಪತಿ ಭಟ್ ಬಿಜೆಪಿಗೆ ಪ್ರಶ್ನೆ ಮಾಡಿದ್ದಾರೆ.

ಬಿಜೆಪಿಯಿಂದ 6 ವರ್ಷ ಉಚ್ಚಾಟನೆ ವಿಚಾರ ಕುರಿತು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಕೈಹಿಡಿದು ಬೆಳೆಸಿದವರೇ ನನ್ನನ್ನು ವಜಾ ಮಾಡಲು ಶಿಫಾರಸ್ಸು ಮಾಡಿದರು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಿಸ್ತು ಸಮಿತಿಯ ನೋಟಿಸ್ ಈವರೆಗೂ ನನಗೆ ತಲುಪಿಲ್ಲ. ಮಾಧ್ಯಮಗಳ ಮೂಲಕ ಉಚ್ಚಾಟನೆ ಎಂದು ಗೊತ್ತಾಯಿತು.

ನಾನು ಮೋದಿಗಾಗಲಿ, ರಾಜ್ಯದ ನಾಯಕರಿಗೆ ಬೈದಿಲ್ಲ. ಪಕ್ಷದ ಎಲ್ಲ ಹುದ್ದೆಯಿಂದ ವಜಾ ಮಾಡುತ್ತೇವೆ ಅಂದಿದ್ದಾರೆ. ಪಕ್ಷದ ನಾಯಕರನ್ನು ಟೀಕಿಸಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತೆ ಬಂದರು. ಪಕ್ಷಕ್ಕೆ ವಾಪಸಾಗಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದರು. ಇದು ಶಾಶ್ವತ ವಜಾ ಅಲ್ಲ ಎಂದರು.

ಬಿಜೆಪಿ ವಿರುದ್ಧ ಕೆಲಸ ಮಾಡುವವರ ಮೇಲೆ ಏನು ಕ್ರಮ ಕೈಗೊಂಡಿದ್ದೀರಿ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದವರ ಮೇಲೆ ಏನು ಶಿಸ್ತು ಕ್ರಮವಾಗಿದೆ? ಅಡ್ಡ ಮತದಾನ ಮಾಡಿದ ಇಬ್ಬರೂ ಶಾಸಕರನ್ನು ಏನು ಮಾಡಿದ್ದೀರಿ? ವಜಾ ಮಾಡಿದ್ದೀರಾ? ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಬೆಂಬಲಿಸಿದ ಶಾಸಕರನ್ನು ವಜಾ ಮಾಡಿದ್ದೀರಾ?ಎಂದು ಶಿಸ್ತು ಸಮಿತಿ ವಿರುದ್ಧ ಕೆಂಡ ಕಾರಿದ್ದಾರೆ.ಕರಾವಳಿ ವಿಚಾರದಲ್ಲಿ ಬಿಜೆಪಿ ಮನಬಂದಂತೆ ನಡೆದುಕೊಳ್ಳುತ್ತಿದೆ. ಈ ಚುನಾವಣೆಯಲ್ಲಿ ಮತದಾರರು ಕಾರ್ಯಕರ್ತರು ಸರಿಯಾದ ಉತ್ತರ ಕೊಡುತ್ತಾರೆ ಎಂದು ಹೇಳಿದ್ದಾರೆ.

 

Related Articles

Back to top button
error: Content is protected !!