ರಾಜಕೀಯ
ಬಿಜೆಪಿ ನಾಯಕಿ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ

Views: 273
ಕನ್ನಡ ಕರಾವಳಿ ಸುದ್ದಿ: ಬಿಜೆಪಿ ನಾಯಕಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಮತ್ತಿಕೆರೆಯಲ್ಲಿ ನಡೆದಿದೆ.
ಮಂಜುಳಾ ಆತ್ಮಹತ್ಯೆಗೆ ಶರಣಾಗಿರುವ ಬಿಜೆಪಿಯ ಮಲ್ಲೇಶ್ವರಂ ಮಂಡಲ ಕಾರ್ಯದರ್ಶಿ ಮತ್ತಿಕೆರೆಯ ತಮ್ಮ ನಿವಾಸದಲ್ಲಿ ಇಂದು ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಬಿಜೆಪಿ ಜನರಲ್ ಸೆಕ್ರೆಟರಿ ಮಂಜುಳಾ ಎಂಬ ಮಹಿಳೆ ಡೆತ್ ನೋಟ್ ಬರೆದಿಟ್ಟು ಮತ್ತಿಕೆರೆಯಲ್ಲಿರುವ ತನ್ನ ಮನೆಯಲ್ಲಿ ಪತ್ತೆಯಾಗಿದ್ದಾರೆ.
ಸಾವಿಗೂ ಮುನ್ನ ಮುಂಜುಳಾ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿಟ್ಟಿದ್ದಾರೆ ಎನ್ನಲಾಗಿದೆ. ಯಶವಂತಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.