ರಾಜಕೀಯ

ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ ಪಾಟೀಲ ರಾಜೀನಾಮೆ

Views: 5

ಕನ್ನಡ ಕರಾವಳಿ ಸುದ್ದಿ: ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡದ ಕಾರಣ ಬೇಸರವಾಗಿದೆ. ಹೀಗಾಗಿ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಲಿಂಗರಾಜ ಪಾಟೀಲ ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಕಳೆದ 37 ವರ್ಷಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಪಕ್ಷ ನೀಡಿದ ಹಲವು ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ. ಈಗ ಟಿಕೆಟ್ ನೀಡದ ಕಾರಣ ನೋವಾಗಿದೆ ಎಂದು ಭಾವುಕರಾದರು.

ಎಸ್.ವಿ.ಸಂಕನೂರ ಅವರಿಗೆ ಟಿಕೆಟ್ ನೀಡಲಾಗಿದೆ. ಅದನ್ನು ಬದಲಿಸಿ ನನಗೆ ಟಿಕೆಟ್ ನೀಡಲು ಇನ್ನೂ ಸಮಯ ಇದೆ. ಎಂಟು ದಿನಗಳಲ್ಲಿ ವರಿಷ್ಠರು ಈ ಬಗ್ಗೆ ತೀರ್ಮಾನ ಮಾಡದಿದ್ದರೆ ನನ್ನ ಮುಂದಿನ ನಿರ್ಧಾರ ಪ್ರಕಟಿಸುತ್ತೇನೆ ಎಂದರು. ಬಿಜೆಪಿಯಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಬೆಲೆ ಇಲ್ಲ. ರಾಜ್ಯದಲ್ಲಿ ಪಕ್ಷ ಬೆಳೆಯದಿರುವುದಕ್ಕೆ ಇದೇ ಕಾರಣ. ಹುಬ್ಬಳ್ಳಿ-ಧಾರವಾಡದಲ್ಲಿ ಪರ್ಯಾಯ ರಾಜಕೀಯ ಶಕ್ತಿ ಬೆಳೆಯಬಾರದು ಎಂದು ನನಗೆ ಟಿಕೆಟ್ ತಪ್ಪಿಸಿರುವ ಸಾಧ್ಯತೆ ಇದೆ. ನನ್ನ ವಿರುದ್ಧ ಪಿತೂರಿ ಮಾಡಿದ್ದಾರೆ. ಪಕ್ಷ ನನಗೆ ಮಾಡಿದ ಅನ್ಯಾಯ ಇಡೀ ಬಿಜೆಪಿ ಕಾರ್ಯಕರ್ತರಿಗೆ ಮಾಡಿದ ಅನ್ಯಾಯವಾಗಿದೆ. ಪಕ್ಷ ನನಗೆ ತಾಯಿ ಇದ್ದಂತೆ, ಪಕ್ಷ ಬಿಡುವುದಿಲ್ಲ. ಆದರೆ, ನನ್ನ ಕಾರ್ಯವೈಖರಿ ಬದಲಾಗಲಿದೆ ಎಂದು ಹೇಳಿದರು.

Related Articles

Back to top button
error: Content is protected !!