ರಾಜಕೀಯ

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್ ಉಚ್ಚಾಟನೆ

Views: 68

ಕನ್ನಡ ಕರಾವಳಿ ಸುದ್ದಿ: ಬಿಜೆಪಿ ವಕ್ತಾರ ಎಂ.ಜಿ.ಮಹೇಶ್ ಅವರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಲಾಗಿದೆ. ಬಿಜೆಪಿ ಶಿಸ್ತು ಸಮಿತಿ ಈ ಕ್ರಮ ಕೈಗೊಂಡಿದೆ.

ವಿಡಿಯೋ ಕಾನ್ಫರೆನ್ಸ್ ನಲ್ಲಿ ಕೀಳುಮಟ್ಟದ, ಅವಹೇಳನಕಾರಿ ಆರೋಪ ಮಾಡಿದ ಹಿನ್ನೆಲೆಯಲ್ಲಿ ಹಾಗೂ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ್ದಕ್ಕೆ ಮಹೇಶ್ ಅವರನ್ನು ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಉಚ್ಚಾಟನೆ ಮಾಡಲಾಗಿದೆ.

ಜೂನ್ 19 ರಂದು ಸಂಜೆ ನಡೆದ ಪಕ್ಷದ ಪ್ರಮುಖರ ಸಭೆಯಲ್ಲಿ ಎಂ.ಜಿ. ಮಹೇಶ್ ಅವರು ಹಿರಿಯ ನಾಯಕರ ವಿರುದ್ಧ ಕೀಳುಮಟ್ಟದ ಆರೋಪಗಳನ್ನು ಮಾಡುವ ಮೂಲಕ ಪಕ್ಷದ ಶಿಸ್ತು ಉಲ್ಲಂಘಿಸಿದ್ದರು.

ಈ ವರ್ತನೆಗೆ ಸಂಬಂಧಿಸಿದಂತೆ ರಾಜ್ಯ ಶಿಸ್ತು ಸಮಿತಿಯು ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿ ಉತ್ತರ ಕೇಳಿತ್ತು. ನೋಟಿಸ್‌ಗೆ ಎಂ.ಜಿ. ಮಹೇಶ್ ಅವರು ನೀಡಿದ ಸ್ಪಷ್ಟೀಕರಣವು ತೃಪ್ತಿಕರವಾಗಿಲ್ಲದ ಕಾರಣ ಅವರನ್ನು ಉಚ್ಚಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.

Related Articles

Back to top button
error: Content is protected !!