ಯುವಜನ
ಬಿಸಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

Views: 68
ಕನ್ನಡ ಕರಾವಳಿ ಸುದ್ದಿ: ಬಿಸಿಎ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಹಾಸ್ಟೆಲ್ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಶಿಲ್ಪಾ ಯರಮಸನಾಳ(20) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.
ಹಾವೇರಿ ಜಿಲ್ಲೆಯ ಶಿಗ್ಗಾಂವ ಮೂಲದ ವಿದ್ಯಾರ್ಥಿನಿ ಸಂಗೊಳ್ಳಿ ರಾಯಣ್ಣ ಕಾಲೇಜಿನಲ್ಲಿ ಬಿಸಿಎ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಹಾಸ್ಟೆಲ್ ನ ರೂಮ್ ನಂ.5ರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ವಿದ್ಯಾರ್ಥಿನಿ ಆತ್ಮಹತ್ಯೆಯಿಂದ ಬೆಚ್ಚಿ ಬಿದ್ದ ಇನ್ನೂಳಿದ ವಿದ್ಯಾರ್ಥಿಗಳು ಆತಂಕದಲ್ಲಿದ್ದಾರೆ. ಸ್ಥಳಕ್ಕೆ ಮಾಳಮಾರುತಿ ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.