ಜನಮನ

ಬಿಸಿಯೂಟದಲ್ಲಿ ಹಾವಿನ ಮರಿ ಬಿದ್ದು : 250 ವಿದ್ಯಾರ್ಥಿಗಳು ಅಸ್ವಸ್ಥ

Views: 50

ಕನ್ನಡ ಕರಾವಳಿ ಸುದ್ದಿ: ಬಿಸಿಯೂಟದಲ್ಲಿ ಹಾವಿನ ಮರಿ ಬಿದ್ದು ಸುಮಾರು 250 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಆಘಾತಕಾರಿ ಘಟನೆ ನಡೆದಿದೆ.

ಬಿಹಾರದ ಸಹರ್ಸಾ ಜಿಲ್ಲೆಯ ಮಹಿಷಿ ಬ್ಲಾಕ್‌ನ ಬಲುವಾಹಾ ಸರ್ಕಾರಿ ಶಾಲೆಯಲ್ಲಿ ಘಟನೆ ನಡೆದಿದೆ. ಮಧ್ಯಾಹ್ನದ ಬಿಸಿಯೂಟದಲ್ಲಿ ಮೃತ ಹಾವಿನ ಮರಿಯೊಂದು ಪತ್ತೆಯಾಗಿದೆ. ಊಟ ಸೇವಿಸಿದ ವಿದ್ಯಾರ್ಥಿಗಳು ಹೊಟ್ಟೆ ನೋವು, ವಾಂತಿ ಮತ್ತು ತಲೆಸುತ್ತಿನಿಂದ ಅಸ್ವಸ್ಥರಾಗಿದ್ದಾರೆ.

ಸುಮಾರು 250 ಮಕ್ಕಳನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು, ಅವರಲ್ಲಿ 115 ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಹರ್ಸಾ ಸದರ್ ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಎಲ್ಲಾ ಮಕ್ಕಳ ಸ್ಥಿತಿ ಸ್ಥಿರವಾಗಿದ್ದು, ವೈದ್ಯರ ವೀಕ್ಷಣೆಯಲ್ಲಿದ್ದಾರೆ.

ಸಹರ್ಸಾ ಜಿಲ್ಲೆಯ ಜಿಲ್ಲಾಧಿಕಾರಿ ಈ ಕುರಿತು ತನಿಖೆಗೆ ಆದೇಶಿಸಿದ್ದು, ಬಿಸಿಯೂಟ ಪೂರೈಸುವ NGO ಮತ್ತು ಶಾಲಾ ಆಡಳಿತದ ವಿರುದ್ಧ ಎಫ್‌ಐಆರ್ ದಾಖಲಿಸಲು ಸೂಚಿಸಿದ್ದಾರೆ. ಆಹಾರದ ಮಾದರಿಗಳನ್ನು ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ.

Related Articles

Back to top button
error: Content is protected !!