ಇತರೆ
ಬೀಜಾಡಿ: ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು
Views: 337
ಕನ್ನಡ ಕರಾವಳಿ ಸುದ್ದಿ: ಕೋಟೇಶ್ವರ ಸಮೀಪ ಬೀಜಾಡಿಯಲ್ಲಿ ಲಾರಿ ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ.
ಮೃತರನ್ನು ವಡ್ಡರ್ಸೆ ನೀರುಕೊಡ್ಲು ನಿವಾಸಿ ದಿ. ಮಂಜುನಾಥ್ ಆಚಾರಿ ಅವರ ಪತ್ನಿ ಶಾರದಾ (55)
ಶಾರದಾ ಅವರು ಕೋಟೇಶ್ವರ ಅಂಕದ ಕಟ್ಟೆಯಲ್ಲಿರುವ ತಮ್ಮ ತಂಗಿಯ ಮನೆಗೆ ತೆರಳುತ್ತಿದ್ದ ಈ ವೇಳೆ ಸ್ಕೂಟಿಯನ್ನು ಅವರ ಮಗ ಚಾಲನೆ ಮಾಡುತ್ತಿದ್ದು, ಅಪಘಾತದ ತೀವ್ರತೆಗೆ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಕೂಟಿ ಓಡಿಸುತ್ತಿದ್ದ ಮಗ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.






