ಕರಾವಳಿ

ಬೃಹತ್‌ ಪ್ರತಿಭಟನೆ: ಅವೈಜ್ಞಾನಿಕ ರಸ್ತೆ ಸರಿಪಡಿಸದಿದ್ದಲ್ಲಿ ಬ್ರಹ್ಮಾವರ ಬಂದ್‌ 

Views: 116

ಕನ್ನಡ ಕರಾವಳಿ ಸುದ್ದಿ: ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿ ಮಹೇಶ್ ಆಸ್ಪತ್ರೆ ಅವೈಜ್ಞಾನಿಕ ಕಾಮಗಾರಿ, ಬಸ್ ನಿಲ್ದಾಣ, ಆಕಾಶವಾಣಿ ಹತ್ತಿರದಲ್ಲಿ ನಿರಂತರ ಅಪಘಾತಗಳು ಸಂಭವಿಸಿ ಸಾವು ನೋವುಗಳಾಗುತ್ತಿದ್ದು, ಹಾಗಾಗಿ ಸಮರ್ಪಕ ಸರ್ವಿಸ್ ರಸ್ತೆ ಮತ್ತು ಫ್ಲೈ ಓವರ್ ನಿರ್ಮಾಣಕ್ಕೆ ಆಗ್ರಹಿಸಿ ಬುಧವಾರ ಬ್ರಹ್ಮಾವರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಮಂಗಳವಾರ ಮಹೇಶ್ ಆಸ್ಪತ್ರೆ ಎದುರುಗಡೆ ನಡೆದ ಭೀಕರ ಅಪಘಾತದಲ್ಲಿ ವಿದ್ಯಾರ್ಥಿ ಸ್ಥಳದಲ್ಲೇ ಮೃತಗೊಂಡಿದ್ದು, ಈ ಬಗ್ಗೆ ವಿದ್ಯಾರ್ಥಿಗಳ ಮತ್ತು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಯಿತು. ಇಲ್ಲಿ ಹಲವು ಬಾರಿ ಅಪಘಾತಗಳು ನಡೆದಿದ್ದು, ಇದರ ಬಗ್ಗೆ ಹಲವಾರು ಬಾರಿ ಸಾರ್ವಜನಿಕರಿಂದ, ವಿವಿಧ ಸಂಘಟನೆಗಳ ಮನವಿಯಿಂದ ಎಚ್ಚೆತ್ತುಕೊಳ್ಳಲೇ ಇಲ್ಲ.

ಬ್ರಹ್ಮಾವರ ಎಸ್.ಎಮ್.ಎಸ್ ಕಾಲೇಜು ಬಳಿಯಿಂದ ತಾಲೂಕು ಅಡಳಿತ ಸೌಧದ ತನಕ ಶಾಂತಿಯುತ ಜಾಥಾ ನಡೆಯಿತು.

ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಬಿರ್ತಿ ಮಾತನಾಡಿ, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದೇ ಇದ್ದಲ್ಲಿ  ದೊಡ್ಡ ಮಟ್ಟದ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಹೋರಾಟಗಾರ ವಸಂತ ಗಿಳಿಯಾರ್ ಮಾತನಾಡಿ, ನಮ್ಮ ಸಮಸ್ಯೆಗಳಿಗೆ ಸ್ಪಂದಿಸದೇ ಇದ್ದಲ್ಲಿ ಎಪ್ರಿಲ್ 12 ರಂದು ಬ್ರಹ್ಮಾವರ ಬಂದ್ ಮಾಡಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಆಗ್ರಹಿಸಿದರು.

ಚರ್ಚ್‌ನ ಧರ್ಮಗುರುಗಳು, ಬ್ರಹ್ಮಾವರದ ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು, ಹಾಗೂ ಹಿರಿಯ ನಾಗರಿಕರ ವೇದಿಕೆ, ರೋಟರಿ, ಲಯನ್ಸ್ ಸೇರಿದಂತೆ ಸುಮಾರು 30ಕ್ಕೂ ಹೆಚ್ಚು ಸಂಘಟನೆಗಳು ಮತ್ತು ಸಾರ್ವಜನಿಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಲೂಕು ಕಚೇರಿ ಮುಂಭಾಗ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.ಒಂದು ವಾರದೊಳಗೆ ಸೂಕ್ತ ಪರಿಹಾರ ಕಂಡುಕೊಂಡು ಸರ್ವಿಸ್ ರಸ್ತೆಯ ಕಾಮಗಾರಿ ಪ್ರಾರಂಭವಾಗದಿದ್ದಲ್ಲಿ ಬ್ರಹ್ಮಾವರ ಬಂದ್ ಮಾಡುವ ಎಚ್ಚರಿಗೆ ನೀಡಲಾಯಿತು.

Related Articles

Back to top button