ಬೃಹ್ಮಾವರ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ:ವಾಸ್ತುತಜ್ಞ ಬಂಧನ

Views: 283
ಬ್ರಹ್ಮಾವರ: ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ವಾಸ್ತು ತಜ್ಞ, ಜಲತಜ್ಞ ಅನಂತ್ ನಾಯ್ಕ(51) ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಬ್ರಹ್ಮಾವರ ಸಮೀಪದ ಚಾಂತಾರು ನಿವಾಸಿ ಆರೋಪಿ ಅನಂತ ನಾಯ್ಕ ಬ್ರಹ್ಮಾವರ ಬಸ್ ನಿಲ್ದಾಣ ಸಮೀಪದ ಲಾಡ್ಜ್ ಒಂದರ ರೂಮಿನಲ್ಲಿ ವಾಸ್ತುತಜ್ಞ, ಜಲತಜ್ಞ, ಯೋಗ ಪಂಡಿತ, ಆಧ್ಯಾತ್ಮಿಕ ಪಂಡಿತ, ಎಂಬುದಾಗಿ ಹೇಳಿಕೊಂಡು ವ್ಯವಹಾರ ನಡೆಸುತ್ತಿದ್ದ ಇವರು 18ರ ಹರೆಯದ ಬಾಲಕ ತನ್ನ ತಂದೆಯೊಂದಿಗೆ ಈತನ ಬಳಿ ವಾಸ್ತು ಕೇಳಲು ಲಾಡ್ಜ್ ನಲ್ಲಿ ತಂಗಿರುವ ವಾಸ್ತು ತಜ್ಞ ಆನಂತ್ ನಾಯ್ಕ ರೂಮಿಗೆ ರಾತ್ರಿ 9:00 ಸುಮಾರಿಗೆ ಹೋಗಿದ್ದರು. ಈ ಸಂದರ್ಭ ತಂದೆಯನ್ನು ಹೊರಗೆ ಕಳುಹಿಸಿದ ಈತ ಯುವಕನಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ದೂರು ನೀಡಲಾಗಿದೆ..ದೂರಿನ ಆಧಾರದ ಮೇಲೆ ಬೃಹ್ಮಾವರ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಅಸ್ವಭಾವಿಕ ಲೈಂಗಿಕ ದೌರ್ಜನ್ಯದ ಕಿರುಕುಳ ಪ್ರಕರಣ ದಾಖಲಾಗಿದೆ.
ಆರೋಪಿ ಅನಂತ್ ನಾಯ್ಕ ಅವರನ್ನು ಗುರುವಾರ ಬೆಳಿಗ್ಗೆ ಬಂಧಿಸಿ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದುಬಂದಿದೆ.






