ಕರಾವಳಿ

ಬೃಹ್ಮಾವರ ಬಿಜೆಪಿ ಯುವ ಮೋರ್ಚಾ ಮುಖಂಡನ ಮನೆಗೆ ಅಬಕಾರಿ ದಾಳಿ: ಲಕ್ಷಾಂತರ ಮೌಲ್ಯದ ಡಿಫೆನ್ಸ್ ಮದ್ಯ ವಶಕ್ಕೆ 

Views: 148

ಬ್ರಹ್ಮಾವರ: ಬಿಜೆಪಿ ಯುವ ಮೋರ್ಚಾದ ಮುಖಂಡೊಬ್ಬನ ಮನೆಯ ಮೇಲೆ  ರಾತ್ರಿ ವೇಳೆ ದಾಳಿ ನಡೆಸಿದ ಉಡುಪಿ ಅಬಕಾರಿ ಪೊಲೀಸರು ಓರ್ವನನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಡಿಫೆನ್ಸ್  ಮದ್ಯಗಳನ್ನು ವಶಪಡಿಸಿಕೊಂಡಿರುವ ಬಗ್ಗೆ ವರದಿಯಾಗಿದೆ

ಲೋಕಸಭಾ ಚುನಾವಣೆ ಪ್ರಯುಕ್ತ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಬಕಾರಿ ಜಂಟಿ ಆಯುಕ್ತರು, ಮಂಗಳೂರು ವಿಭಾಗ ಹಾಗೂ ಅಬಕಾರಿ ಉಪ ಆಯುಕ್ತರು ಉಡುಪಿ ಜಿಲ್ಲೆ ಇವರುಗಳು ಮಾರ್ಗದರ್ಶನದಂತೆ ಖಚಿತ ಮಾಹಿತಿ ಮೇರೆಗೆ ಉಡುಪಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಬ್ರಹ್ಮಾವರ ಇಂದಿರಾನಗರದಲ್ಲಿರುವ ರಮೇಶ ಪ್ರಭು ಎಂಬವರ ಮನೆ ಮೇಲೆ ಈ ಅಬಕಾರಿ ದಾಳಿ ನಡೆದಿದೆ. ರಮೇಶ್ ಪ್ರಭು ಅವರ ಪುತ್ರ ಬಿಜೆಪಿ ಉಡುಪಿ ಜಿಲ್ಲಾ ಯುವ ಮೋರ್ಚಾದ ಮುಖಂಡ ಎಂದು ತಿಳಿದು ಬಂದಿದೆ

ಮನೆಯಲ್ಲಿ ಅಕ್ರಮವಾಗಿ ಮದ್ಯ ದಾಸ್ತಾನು ಮಾಡಿರುವ ಖಚಿತ ಮಾಹಿತಿ ಮೇರೆಗೆ ಅಬಕಾರಿ ದಾಳಿ ನಡೆಸಿದಾಗ ಒಟ್ಟು 33.500 ಲೀಟರ್ ಡಿಫೆನ್ಸ್ ಮದ್ಯ ಪತ್ತೆಯಾಗಿದ್ದು, ಇದರ ಒಟ್ಟು ಮೌಲ್ಯ 1,55,000ರೂ. ಎಂದು ಅಂದಾಜಿಸಲಾಗಿದೆ. ಆರೋಪಿ ರಮೇಶ್ ಪ್ರಭುವನ್ನು ಬಂಧಿಸಲಾಗಿದೆ.

ಈ ಬಗ್ಗೆ ಉಡುಪಿ ಉಪ ವಿಭಾಗದ ಅಬಕಾರಿ ಉಪ ನಿರೀಕ್ಷಕಿ ಮಧುರಾ. ಎನ್. ದಾಸ್ ಮೊಕದ್ದಮೆಯನ್ನು ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ

Related Articles

Back to top button