ಕರಾವಳಿ

ಬೃಹ್ಮಾವರ ಸಕ್ಕರೆ ಕಾರ್ಖಾನೆ ಗುಜರಿ ಮಾರಾಟದಲ್ಲಿ ಅವ್ಯವಹಾರ ತನಿಖೆಗೆ ನ್ಯಾಯಾಲಯ ಆದೇಶ 

Views: 0

ಕರಾವಳಿ ಭಾಗದಲ್ಲಿರುವ ಏಕೈಕ ಸಹಕಾರಿ ಸಕ್ಕರೆ ಕಾರ್ಖಾನೆಯಾಗಿರುವ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಕಳೆದೆರಡು ವರ್ಷಗಳಲ್ಲಿ ನಡೆದಿರುವ ಗುಜರಿ ಮಾರಾಟ ಪ್ರಕ್ರಿಯೆಯಲ್ಲಿ ಭಾರೀ ಪ್ರಮಾಣದ ಭ್ರಷ್ಚಾಚಾರ ನಡೆದಿದೆ. ಇದರ ಎಲ್ಲಾ ಸ್ತರಗಳಲ್ಲೂ ವ್ಯಾಪಕ ವಂಚನೆ ಹಾಗೂ ಅವ್ಯವಹಾರ ನಡೆದಿದೆ ಎಂದು ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಹಾಗೂ ಕುಂದಾಪುರದ ಮಾಜಿ ಶಾಸಕ, ವಿಧಾನಪರಿಷತ್‌ನ ಮಾಜಿ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಆರೋಪಿಸಿದ್ದರು.

ಈ ಅವ್ಯವಹಾರದ ಹಿಂದೆ ದೊಡ್ಡ ಜಾಲವೊಂದಿದ್ದು, ರಾಜ್ಯ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಇದರಲ್ಲಿ ಶಾಮೀಲಾಗಿದ್ದಾರೆ. ಆಡಳಿತ ಮಂಡಳಿ ಕಾರ್ಖಾನೆಯನ್ನು ಮುಳುಗಿಸಬೇಕೆಂಬ ಉದ್ದೇಶದೊಂದಿಗೆ ಬಂದಿರುವುದು ಸ್ಪಷ್ಟ. ಗುಜರಿಯನ್ನು ಮಾತ್ರವನ್ನು ಕಟ್ಟಡದ ಪಂಚಾಂಗದ ಕಲ್ಲನ್ನು ಸಹ ಮಾರಿದೆ ಎಂದು ಆರೋಪಿಸಿದ ಅವರು ಇಡೀ ಹಗರಣದ ಕುರಿತು ತನಿಖೆ ನಡೆಸಬೇಕು ಎಂದಿದ್ದರು.

ಈ ಅವ್ಯವಹಾರದ ಹಿಂದೆ ದೊಡ್ಡ ಜಾಲವೊಂದಿದ್ದು, ರಾಜ್ಯ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಇದರಲ್ಲಿ ಶಾಮೀಲಾಗಿದ್ದಾರೆ.ನಮಗೆ ಸೇರಿದ ಸೊತ್ತು ನಮ್ಮ ಕಣ್ಣೇದುರೇ ಲೂಟಿಯಾಗುವಾಗ ರೈತ ಸಂಘ ಕಣ್ಣು ಮುಚ್ಚಿ ಕುಳಿತುಕೊಳ್ಳಲು ಸಾಧ್ಯವಿಲ್ಲ. ಎಂದು ರೈತ ಸಂಘದವರು ಆರೋಪಿಸಿದ್ದರು.

ಈ ಹಿನ್ನೆಲೆಯಲ್ಲಿ ನೀಡಿದ ದೂರಿನ ಹಿನ್ನೆಲೆಯಲ್ಲಿ ನ್ಯಾಯಾಲಯವು ಬೃಹ್ಮಾವರದ ಪೊಲೀಸ್ ಠಾಣೆಗೆ ಡಿ.12 ರೊಳಗೆ ತನಿಖೆ ನಡೆಸಿ ವರದಿ ಕಳುಹಿಸುಂತೆ ಆದೇಶಿಸಿದೆ

Related Articles

Back to top button