ರಾಜಕೀಯ

ಬೆಂಗಳೂರಿಗೆ ಬರಲು ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ!

Views: 31

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ  ವಿಡಿಯೋ ಬಿಡುಗಡೆ ಮಾಡಿ ಮೇ 31ರಂದು ಭಾರತಕ್ಕೆ ವಾಪಸ್ಸಾಗುವುದಾಗಿ ಹೇಳಿದ್ದರು. ಇದೀಗ ರೇವಣ್ಣ ಜರ್ಮಿನಿಯಿಂದ ಬೆಂಗಳೂರಿಗೆ ಬರಲು ಕ್ಲಾಸ್ ಟಿಕೆಟ್ ಬುಕ್ ಮಾಡಿದ್ದಾರೆ.

ವಿಮಾನ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಮೇ 31ರ ಮಧ್ಯರಾತ್ರಿ 12:30ಕ್ಕೆ ಆಗಮಿಸಲಿರುವುದರಿಂದ ಜೂನ್ 1ಕ್ಕೆ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.

ಎನ್ಐಟಿ ತಂಡ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆಯೇ ಎಸ್ಐಟಿ ಅಧಿಕಾರಿಗಳು ಬಂಧಿಸುವ ಎಲ್ಲಾ ಸಾಧ್ಯತೆಗಳಿವೆ.

ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳದ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು ಮಂಗಳವಾರ ಸೆಕ್ಸ್ ಹಗರಣದ ವೀಡಿಯೊಗಳನ್ನು ಹೊಂದಿರುವ ಪೆನ್ ಡ್ರೈವ್‌ಗಳನ್ನು ಹಂಚಿದ್ದ ಆರೋಪ ಎದುರಿಸುತ್ತಿರುವ ಇಬ್ಬರು ಆರೋಪಿಗಳನ್ನು ಬಂಧಿಸಿದೆ.

ಬಂಧಿತರನ್ನು ನವೀನ್ ಗೌಡ ಮತ್ತು ಚೇತನ್ ಎಂದು ಗುರುತಿಸಲಾಗಿದ್ದು, ಎಸ್‌ಐಟಿ ಅಧಿಕಾರಿಗಳು ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.

Related Articles

Back to top button
error: Content is protected !!