ಕ್ರೀಡೆ

ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ10 ಕ್ಕೂ ಹೆಚ್ಚು ಸಾವು:ನ್ಯಾಯಾಂಗ ತನಿಖೆಗೆ ಆಗ್ರಹ

Views: 110

ಕನ್ನಡ ಕರಾವಳಿ ಸುದ್ದಿ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತಕ್ಕೆ 10ಕ್ಕೂ ಹೆಚ್ಚು  ಮಂದಿ ಸಾವನ್ನಪ್ಪಿದ್ದಾರೆ. ಈ ಘಟನೆ ಬಗ್ಗೆ ನ್ಯಾಯಾಂಗ ತನಿಖೆ ಆಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗ್ರಹ ಮಾಡಿದ್ದಾರೆ.

ಇದು ಸರ್ಕಾರದ ಬೇಜವಾಬ್ದಾರಿ ಆಗಿದೆ. ಸರ್ಕಾರವೇ ನೇರ ಹೊಣೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಮಾಯಕರ ಸಾವಾಗಿದೆ. ಬೌರಿಂಗ್ ಆಸ್ಪತ್ರೆಯಲ್ಲಿ 7 ಜನ ಹಾಗೂ ವೈದೇಹಿ ಆಸ್ಪತ್ರೆಯಲ್ಲಿ 4 ಜನ ಸಾವನ್ನಪ್ಪಿದ್ದಾರೆ.

ಈ ಕುರಿತು ಮಾತನಾಡಿದ ವಿಪಕ್ಷ ನಾಯಕ ಆರ್. ಅಶೋಕ್, ಇದು ದೊಡ್ಡ ದುರಂತ. ಸಿಎಂ ಸಿದ್ದರಾಮಯ್ಯ ಅವರಿಗೆ ಮೊದಲೆ ಗೊತ್ತಿತ್ತು. ಅವರಿಗೆ ಮೆಸೇಜ್ ಬಂದಿತ್ತು. ಸಾವಿನ ಮೆಸೇಜ್ ಬಂದ ಮೇಲೆ ಸನ್ಮಾನ ಮಾಡಿದ್ದು ಸರಿನಾ. ಇಲ್ಲಿ ರಾಜಕೀಯ ನಾಯಕರು, ವಿಧಾನಸೌಧ ಸಿಬ್ಬಂದಿ ಅವರ ಮಕ್ಕಳು, ಮೊಮ್ಮಕ್ಕಳು ಬಂದು ಸೆಲ್ಫಿ ತೆಗೆದುಕೊಂಡು ಎಂಜಾಯ್ ಮಾಡುತ್ತಿದ್ದರು. ಇಲ್ಲಿ ಅಮಾಯಕರ ಸಾವು ಸಂಭವಿಸಿದೆ. ಈ ಬಗ್ಗೆ ನ್ಯಾಯಾಂಗ ತನಿಖೆ ಆಗಬೇಕು ಎಂದು ಆಗ್ರಹ ಮಾಡಿದರು.

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ‘ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲುನಿಂದ ಉಂಟಾದ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ. ಗೆಲುವಿನ ಸಂಭ್ರಮಕ್ಕೆ ಮುನ್ನವೇ ಮುಗ್ಧರ ಜೀವ ನಷ್ಟವಾಗಿರುವುದು ನನಗೆ ಅತೀವ ದುಃಖ ತಂದಿದೆ. ಸರಿಯಾದ ಪೂರ್ವಸಿದ್ಧತೆ ಮಾಡಿಕೊಳ್ಳದೆ, ಯಾವುದೇ ಮುನ್ನೆಚ್ಚರಿಕೆ ವಹಿಸದಿರುವುದೇ ಈ ಮಹಾದುರಂತಕ್ಕೆ ನೇರ ಕಾರಣ. ದುರಂತದ ಹೊಣೆಯನ್ನು ರಾಜ್ಯ ಕಾಂಗ್ರೆಸ್ ಸರಕಾರವೇ ಹೊತ್ತುಕೊಳ್ಳಬೇಕು. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸುವುದರ ಜತೆಗೆ ಮೃತರ ಕುಟುಂಬಗಳ ನೆರವಿಗೆ ಸರಕಾರ ಕೂಡಲೇ ಧಾವಿಸಬೇಕು. ಕ್ರೀಡಾಂಗಣ ಹಾಗೂ ವಿಧಾನಸೌಧದ ಬಳಿ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಬಂದಿದ್ದ ಕ್ರಿಕೆಟ್ ಪ್ರೇಮಿಗಳು ಗಾಬರಿ, ಆತುರಕ್ಕೆ ಒಳಗಾಗದೆ ಕ್ಷೇಮವಾಗಿ ಮನೆ ತಲುಪಬೇಕು ಎಂಬುದು ನನ್ನ ಕಳಕಳಿ. ಪೊಲೀಸರು ಈ ನಿಟ್ಟಿನಲ್ಲಿ ತುರ್ತುಕ್ರಮ ವಹಿಸಿ ಜನರಿಗೆ ನೆರವಾಗಬೇಕು’ ಎಂದು ಪೋಸ್ಟ್ ಮಾಡಿದ್ದಾರೆ.

Related Articles

Back to top button