ಬೆಂಗಳೂರು-ಪುಣೆ 2 ಟ್ರಕ್ಗಳ ನಡುವೆ ಕಾರು ಸಿಲುಕಿ 8 ಮಂದಿ ಸ್ಥಳದಲ್ಲೇ ಸಾವು
Views: 66
ಕನ್ನಡ ಕರಾವಳಿ ಸುದ್ದಿ: ಎರಡು ಟ್ರಕ್ಗಳು ಡಿಕ್ಕಿ ಹೊಡೆದು ಕಾರೊಂದು ಅಪಘಾತಕ್ಕೀಡಾಗಿದ್ದು, ಎಂಟು ಜನರು ಸಾವನ್ನಪ್ಪಿದ್ದು, 15 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ
ಪುಣೆಯ ನವಲೆ ಸೇತುವೆ ಪ್ರದೇಶದಲ್ಲಿ ನಡೆದ ಅಪಘಾತದಲ್ಲಿ ಟ್ರಕ್ಗಳ ನಡುವೆ ಸಿಲುಕಿಕೊಂಡಿದ್ದ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿ, ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು.
ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡು, ಭಾರಿ ಸಂಚಾರ ದಟ್ಟಣೆ ಉಂಟಾಗಿತ್ತು. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಸದ್ಯ ಅಪಘಾತದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಹಾರಾಷ್ಟ್ರದ ಬೆಂಗಳೂರು – ಪುಣೆ ಹೆದ್ದಾರಿಯಲ್ಲಿ ನವಲೆ ಸೇತುವೆ ಬಳಿ ರಾತ್ರಿ 8:30ರ ಸುಮಾರಿಗೆ ವೇಗವಾಗಿ ಬಂದ ಟ್ರಕ್ವೊಂದು ನಿಯಂತ್ರಣ ಕಳೆದುಕೊಂಡು ಹಲವು ವಾಹನಗಳಿಗೆ ಸರಣಿಯಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಾಹನಗಳಲ್ಲಿ ತಕ್ಷಣವೇ ಭಾರಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ವಾಹನಗಳಲ್ಲಿದ್ದ ಎಂಟು ಮಂದಿ ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದಾರೆ ಎನ್ನಲಾಗಿದೆ.






