ಇತರೆ

ಬೆಂಗಳೂರು ರೌಡಿಶೀಟರ್ ಬರ್ಬರ ಹತ್ಯೆ

Views: 136

ಬೆಂಗಳೂರು: ಇಂದು ದುಷ್ಕರ್ಮಿಗಳು ರೌಡಿಶೀಟರ್ನನ್ನು ಬರ್ಬರ‌ ಹತ್ಯೆ ಮಾಡಿರುವ  ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಾರ್ತಿಕೇಯನ್ (40) ಮೃತ ರೌಡಿ ಶೀಟರ್

ಇಂದು‌ ಸಂಜೆ ವೇಳೆಗೆ ದುಷ್ಕರ್ಮಿಗಳು ಸ್ಕೆಚ್ ಹಾಕಿ ಕಾರ್ತಿಕೇಯನನ್ನು ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಶಂಕಿಸಿದ್ದಾರೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಬಾಣಸವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು, ಈ ಘಟನೆ ಸಂಬಂಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

Related Articles

Back to top button
error: Content is protected !!