ಇತರೆ

ಬೆಂಗಳೂರು :19ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

Views: 85

ಬೆಂಗಳೂರು: 19ನೇ ಮಹಡಿಯಿಂದ ಜಿಗಿದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಖಾಸಗಿ ಹೋಟೆಲ್‌ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಮಿಳುನಾಡು ಮೂಲದ ಶರಣ್ (28) ಮೃತ ದುರ್ದೈವಿ.

ನಿನ್ನೆ ಭಾನುವಾರ ಬಂದು ಹೋಟೆಲ್‌ನಲ್ಲಿ ರೂಂ ಬುಕ್‌ ಮಾಡಿದ್ದ. ಮತ್ತೆ ಎರಡು ದಿನ ರೂಂ ಹೆಚ್ಚುವರಿ ಬುಕ್ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಮುನ್ನ ಶರಣ್‌ ಅರ್ಧ ಗಂಟೆಗೂ ಅಧಿಕ ಸಮಯದಿಂದ ಬಾಲ್ಕನಿಯಲ್ಲಿ ಓಡಾಡುತ್ತಿದ್ದ. ಆತನ ನಡವಳಿಕೆಯನ್ನು ಗಮನಿಸಿದ ಭದ್ರತಾ ಸಿಬ್ಬಂದಿ ಅನುಮಾನಗೊಂಡು ತೆರಳುವಷ್ಟರಲ್ಲಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕೂಡಲೇ ಹೋಟೆಲ್‌ ಸಿಬ್ಬಂದಿ ಈ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಹೈಗ್ರೌಂಡ್ಸ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆತ ತಂಗಿದ್ದ ರೂಮಿನಲ್ಲಿ ಡೆತ್‌ನೋಟ್‌  ಸಿಗಬಹುದಾ ಎಂದು ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

 

Related Articles

Back to top button
error: Content is protected !!