ಇತರೆ

ಬೆಳಗಾವಿ: ಅಪ್ರಾಪ್ತ ಬಾಲಕಿಯ ಮೇಲೆ ಮೂವರು ಬಾಲಕರಿಂದ ಅತ್ಯಾಚಾರ 

Views: 55

ಕನ್ನಡ ಕರಾವಳಿ ಸುದ್ದಿ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ರೆಸಾರ್ಟ್‌ಗೆ ಕರೆದೊಯ್ದು ಮೂವರು ಬಾಲಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಇಬ್ಬರು ಆರೋಪಿಗಳನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ‌.

ನಗರದ ಹೊರವಲಯದ ರೆಸಾರ್ಟ್‌ನಲ್ಲಿ ಮೂವರು ಬಾಲಕರಿಂದ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂಬ ಆರೋಪದಲ್ಲಿ ಮೇ 11 ರಂದು ನಗರದ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಕುರಿತು ತನಿಖೆ ಕೈಗೊಂಡ‌ ಪೊಲೀಸರು ಇಬ್ಬರು ಬಾಲಕರನ್ನು ಬಂಧಿಸಿದ್ದಾರೆ.

ನಗರದ ಹೊರವಲಯದ ರೆಸಾರ್ಟ್‌ನಲ್ಲಿ ಸಾಕಿಬ್ ಎಂಬಾತನ ಹೆಸರಿನಲ್ಲಿ ರೂಮ್‌ ಬುಕ್ ಮಾಡಲಾಗಿತ್ತು. ನಂತರ ಮೂವರು ಬಾಲಕರು, ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಘಟನೆ ನಡೆದ ಕೆಲ ದಿನಗಳ ನಂತರ ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಕುಟುಂಬದವರು ಆಸ್ಪತ್ರೆಗೆ ಕರೆದೊಯ್ದಾಗ ಘಟನೆ ಬೆಳಕಿಗೆ ಬಂದಿದೆ.

ಈ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಮೂವರು ಬಾಲಕರ ಪೈಕಿ ಓರ್ವ ಪೊಲೀಸ್ ಅಧಿಕಾರಿ ಪುತ್ರ ಎಂದು ಹೇಳಲಾಗುತ್ತಿದ್ದು, ಆತನ ಬಂಧನಕ್ಕೂ ಪೊಲೀಸರು ಬಲೆ ಬೀಸಿದ್ದಾರೆ. ಈ ಕುರಿತು ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಹಾಗೂ ಅತ್ಯಾಚಾರ ಪ್ರಕರಣ ದಾಖಲಾಗಿದೆ.

 

Related Articles

Back to top button