ಕರಾವಳಿ

ಬೆಳ್ತಂಗಡಿ :ಅಕ್ರಮ ಕಲ್ಲುಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಬಂಧನ; ಠಾಣೆಯಲ್ಲೇ ಪ್ರತಿಭಟನೆ ನಡೆಸುವ ನೆಪದಲ್ಲಿ ಪೊಲೀಸರಿಗೆ ಧಮಕಿ ಹಾಕಿದ ಶಾಸಕ?

Views: 79

ಬೆಳ್ತಂಗಡಿ: ಆಕ್ರಮ ಕಲ್ಲು ಗಣಿಕಾರಿಕೆ ಪ್ರಕರಣದಲ್ಲಿ ಬೆಳ್ತಂಗಡಿ ಬಿಜೆಪಿ ತಾಲೂಕು ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್‌ ಶೆಟ್ಟಿ ಸೇರಿದಂತೆ, ಆತನ ಸಹಚರರನ್ನು ಪೊಲೀಸರು ಬಂಧಿಸಿದ್ದು, ಶಾಸಕ ಹರೀಶ್ ಪೂಂಜಾ ತಮ್ಮ ಬೆಂಬಲಿಗರೊಂದಿಗೆ ಶನಿವಾರ ರಾತ್ರಿ ಬೆಳ್ತಂಗಡಿ ಠಾಣೆಗೆ ತೆರಳಿ ಪೊಲೀಸ್ ಅಧಿಕಾರಿಗಳಿಗೆ ಧಮಕಿ ಹಾಕಿದ್ದ ವಿಡಿಯೋ ವೈರಲ್ ಆಗಿದೆ,

ತಾಲ್ಲೂಕಿನ ಮೆಲಂತಬೆಟ್ಟು ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲು ಕ್ವಾರೆಗೆ ಶನಿವಾರ ಸಂಜೆ ಬೆಳ್ತಂಗಡಿ ತಹಶೀಲ್ದಾರ್ ಮತ್ತು ಪೊಲೀಸರ ತಂಡ ಜಂಟಿ ದಾಳಿ ನಡೆಸಿ, ಕಲ್ಲು ಕ್ವಾರಿಯಲ್ಲಿನ ಸ್ಫೋಟಕಗಳು ವಶಪಡಿಕೊಂಡಿದ್ದರು. ಜೊತೆಗೆ, ಸಂಬಂಧಪಟ್ಟ ಆರೋಪಿಗಳನ್ನು ಬಂಧಿಸಿದ್ದರು. ಬಿಜೆಪಿ ತಾಲ್ಲೂಕು ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್‌ ಶೆಟ್ಟಿ ಈ ಅಕ್ರಮ ಕಲ್ಲು ಕ್ವಾರಿ ನಡೆಸುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

ತಮ್ಮ ಪಕ್ಷದ ಕಾರ್ಯಕರ್ತನನ್ನು ಬಂಧಿಸಿದ ಸುದ್ದಿ ತಿಳಿಯುತ್ತಿದ್ದಂತೆಯೇ, ಠಾಣೆಗೆ ಧಾವಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ತಮ್ಮ ಬೆಂಬಲಿಗರೊಂದಿಗೆ ಪೊಲೀಸ್ ಠಾಣೆಯಲ್ಲೇ ಪ್ರತಿಭಟನೆ ನಡೆಸುವ ನೆಪದಲ್ಲಿ ಪೊಲೀಸರು ಧಮಕಿ ಹಾಕಿದ್ದಾರೆ ಎನ್ನಲಾಗಿದೆ.

ಮೇಲಂತಬೆಟ್ಟು ಮೂಡಲ ನಿವಾಸಿ ಸೂರಪ್ಪ ಪೂಜಾರಿ ಎಂಬವರ ಜಾಗದಲ್ಲಿ ಈ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿತ್ತು ಎನ್ನಲಾಗಿದೆ. ಬಿಜೆಪಿ ಮುಖಂಡ ಪ್ರಮೋದ್ ದಿಡುಪೆ ಹಾಗೂ ಬಿಜೆಪಿ ಯುವ ಮೋರ್ಚಾ ತಾಲ್ಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಇಬ್ಬರೂ ನಡೆಸುತ್ತಿದ್ದರೆಂದು ಹೇಳಲಾಗಿದೆ. ಈ ಕ್ವಾರಿಯನ್ನು ಯಾವುದೇ ಸೂಕ್ತ ದಾಖಲೆಗಳಿಲ್ಲದೇ ನಡೆಸಲಾಗುತ್ತಿತ್ತು ಎಂಬ ದೂರುಗಳ ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದರು ಎನ್ನಲಾಗಿದ್ದು, ಸ್ಥಳದಲ್ಲಿದ್ದ ಶಶಿರಾಜ್‌ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಒಂದು ಹಿಟಾಚಿ, ಒಂದು ಕಂಪ್ರೆಸರ್ ಮೆಷಿನ್, ಒಂದು ಕಾರು ಹಾಗೂ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Related Articles

Back to top button
error: Content is protected !!