ಬೆಳ್ಳಂಬೆಳಿಗ್ಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ದಾಳಿ
Views: 55
ಕನ್ನಡ ಕರಾವಳಿ ಸುದ್ದಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೊಳಿ ನಿವಾಸ, ಕಚೇರಿಗಳ ಮೇಲೆ ಇಡಿ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಸಚಿವರ ಆಪ್ತರ ಮನೆ ಮೇಲೂ ದಾಳಿ ನಡೆದಿದೆ.
ಸಚಿವ ಸತೀಶ್ ಜಾರಕಿಹೊಳಿ ಅವರ ಆಪ್ತರ ಮನೆಗಳ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳಗಾವಿಯ 5 ಕಡೆಗಳಲ್ಲಿ ಇಡೀ ಅಧಿಕಾರಿಗಳು ರೇಡ್ ಮಾಡಿದ್ದಾರೆ.
ಸತೀಶ್ ಜಾರಕಿಹೊಳಿ ಆಪ್ತ ಡಾ. ಗಿರೀಶ್ ಅವರ ಬೆಳಗಾವಿಯ ಲಕ್ಷ್ಮೀ ಟೇಕ್ ನಲ್ಲಿರುವ ನಿವಾಸ, ರಾಜ್ಯ್ ಧರಮಶೆಟ್ಟಿ ಹಾಗೂ ವಿಠಲ ಪರಸನ್ನವರ್ ಅವರ ಗೋಕಾಕ್ ನಲ್ಲಿರುವ ಇಬ್ಬರ ನಿವಾಸ ಹಾಗೂ ಸತೀಶ್ ಜಾರಕಿಹೊಳಿ ಬಾಮೈದ ಮಂಜುನಾಥ್ ಅವರ ಮನೆ ಸೇರಿದಂತೆ ಒಟ್ಟು ಬೆಳಗಾವಿಯ ಐದು ಕಡೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಇಡಿ ಅಧಿಕಾರಿಗಳು ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದ ಮೇಲೆ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಮತ್ತೊಂದೆಡೆ ಅವರ ಬಾಮೈದ ಮಂಜುನಾಥ್ ಮನೆ ಸೇರಿದಂತೆ ಬೆಳಗಾವಿಯ ಐದು ಕಡೆ ದಾಳಿ ನಡೆಸಿದ್ದಾರೆ. ಕಳೆದ ಜೂನ್ ತಿಂಗಳಿನಲ್ಲಿ ಬೆಳಗಾವಿ ವಿಭಾಗದ ಅಬಕಾರಿ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿದಂತೆ ಬೆಂಗಳೂರು, ಬೆಳಗಾವಿ, ಮೈಸೂರು ಹಾಗೂ ಅಥಣಿ ಪ್ರದೇಶಗಳಲ್ಲಿ ಇಡಿ ಸುದೀರ್ಘ ದಾಳಿ ನಡೆಸಲಾಅಗಿತ್ತು.
ಬಾರ್ ಲೈಸೆನ್ಸ್ ನೀಡುವಲ್ಲಿ ಭ್ರಷ್ಟಾಚಾರ ನಡೆಸಿದ ಆರೋಪದ ಮೇಲೆ ನಡೆದಿದ್ದ ಆ ಕಾರ್ಯಾಚರಣೆಯ ವೇಳೆ ಮಂಜುನಾಥ್ ಮನೆಯಲ್ಲಿ ನೂರಾರು ಬೇನಾಮಿ ಬಾರ್ ಲೈಸೆನ್ಸ್, 5.5 ಲಕ್ಷ ರೂ. ನಗದು ಹಾಗೂ ಬರೋಬ್ಬರಿ 13.3 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಪತ್ತೆಯಾಗಿತ್ತು. ವಿದೇಶಿ ಅಕ್ರಮ ಹಣ ಹಾಗೂ ಹವಾಲಾ ಜಾಲದ ನಂಟು ಸಚಿವರಿಗೂ ತಲುಪಿದೆ ಎಂಬ ಶಂಕೆಯ ಮೇಲೆ ಇದೀಗ ಸಚಿವರ ಮನೆ ಮೇಲೆ ದಾಳಿ ನಡೆದಿದೆ.






