ಬೈಂದೂರಿನಲ್ಲಿ ಗೀತಾ ಶಿವರಾಜ್ ಕುಮಾರ್ ಪರವಾಗಿ ನಟ,ನಟಿಯರ ಭರ್ಜರಿ ಪ್ರಚಾರ

Views: 150
ಮೇ 7ರಂದು ಶಿವಮೊಗ್ಗ ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದೆ. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರವಾಗಿ ಕನ್ನಡ ಚಿತ್ರರಂಗದ ನಟ, ನಟಿಯರು ಪ್ರಚಾರವನ್ನು ಕೈಗೊಂಡಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರವಾಗಿ ಕನ್ನಡ ಚಿತ್ರರಂಗದ ನಟ, ನಟಿಯರು ಪ್ರಚಾರವನ್ನು ಕೈಗೊಂಡಿದ್ದಾರೆ. ಮೇ 7ರಂದು ಶಿವಮೊಗ್ಗ ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರ ಪರವಾಗಿ ಮುಡುಬ ಸಿದ್ದಾಪುರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ದುನಿಯಾ ವಿಜಯ್, ಅನುಶ್ರೀ, ಚಿಕ್ಕಣ್ಣ ಮುಂತಾದವರು ಪಾಲ್ಗೊಂಡಿದ್ದರು.
ಗೀತಾ ಶಿವರಾಜ್ ಕುಮಾರ್ ಮತ್ತು ಶಿವರಾಜ್ ಕುಮಾರ್ ಬೈಂದೂರು ವಿಧಾನಸಭಾ ಕ್ಷೇತ್ರದ ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಕ್ಷೇತ್ರದ ಹೃದಯ ಭಾಗದಲ್ಲಿ ವಿರಾಜಮಾನರಾಗಿ ಭಕ್ತಾದಿಗಳನ್ನು ಹರಸಿ ಹಾರೈಸುತ್ತಿರುವ ಕಾರಣಿಕ ಶಕ್ತಿ ಶ್ರೀ ಲಕ್ಷ್ಮೀ ನಾರಾಯಣ ಸ್ವಾಮಿಯಲ್ಲಿ ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು.

ಬೈಂದೂರಿನ ಕಿರಿಮಂಜೇಶ್ವರದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಶಿವರಾಜ್ ಕುಮಾರ್, ದುನಿಯಾ ವಿಜಯ್, ನಿಕೀತ್ ರಾಜ್ ಮೌರ್ಯ, ಅನಿಲ್ ಕುಮಾರ್ ತಡಕಲ್, ಕೆ. ಗೋಪಾಲ ಪೂಜಾರಿ, ಬಿ. ಎಂ. ಸುಕುಮಾರ್ ಶೆಟ್ಟಿ ಮುಂತಾದವರು ಪಾಲ್ಗೊಂಡಿದ್ದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರ ಪರವಾಗಿ ಮುಡುಬ ಸಿದ್ದಾಪುರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಪಾಲ್ಗೊಂಡು ಮತ ಯಾಚನೆ ಮಾಡಲಾಗಿದೆ.

ಬೈಂದೂರಿನ ಕಿರಿಮಂಜೇಶ್ವರದಲ್ಲಿ ಆಯೋಜಿಸಿದ್ದ ಸಭೆ ಹಾಗೂ ಮಹಿಳಾ ಸಮಾವೇಶ ಕಾರ್ಯಕ್ರಮದಲ್ಲಿ ಶಿವರಾಜ್ ಕುಮಾರ್, ದುನಿಯಾ ವಿಜಯ್ ಶಿವಮೊಗ್ಗದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರವಾಗಿ ಮತಯಾಚನೆ ಮಾಡಿದರು.






